ಆಮ್ ಆದ್ಮಿ ಪಾರ್ಟಿ ನಡೆ ಹಳ್ಳಿಯ ಕಡೆ

Aam Aadmi Party marched towards the village
Published on

ಮಡಿಕೇರಿ:

ಜಿಲ್ಲೆಯ ಗ್ರಾಮೀಣ ಪ್ರದೇಶದ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿ ವರದಿ ಸಂಗ್ರಹಿಸುವ ಉದ್ದೇಶದಿಂದ ಆಮ್ ಆದ್ಮಿ ಪಾರ್ಟಿ ನಡೆ ಹಳ್ಳಿಯ ಕಡೆ ಎಂಬ ಗ್ರಾಮ ಸಂಪರ್ಕ ಕಾರ್ಯಕ್ರಮವನ್ನು ಆಮ್ ಆದ್ಮಿ ಪಾರ್ಟಿ ಆರಂಭಿಸಿದೆ.

ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ನೇತೃತ್ವದಲ್ಲಿ ವಿವಿಧ ಗ್ರಾಮಗಳಿಗೆ ತೆರಳಿದ ಪ್ರಮುಖರು ಗ್ರಾಮಸ್ಥರಿಂದ ಮಾಹಿತಿ ಪಡೆದರು. ಪೊನ್ನಂಪೇಟೆ ತಾಲೂಕಿನ ಬಿರುನಾಣಿ, ಪೂಕಳ, ತೆರಾಲು, ಬೀರುಗ, ಕುಟ್ಟ, ಕೆ.ಬಾಡಗ, ನಾಲ್ಕೇರಿ, ಕಾನೂರು, ಬಾಳೆಲೆ ಮತ್ತು ನಿಟ್ಟೂರು ಗ್ರಾಮಗಳಿಗೆ ಭೇಟಿ ನೀಡಲಾಯಿತು.

ಸರ್ಕಾರಿ ಶಾಲೆ ಮತ್ತು ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳು, ಶಿಕ್ಷಕರು, ಆಸ್ಪತ್ರೆ ಸಿಬ್ಬಂದಿ ಸ್ಥಿತಿಗತಿ, ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು

ಈ ಸಂದರ್ಭ ಮಾತನಾಡಿದ ಭೋಜಣ್ಣ ಸೋಮಯ್ಯ ಬಹಳಷ್ಟು ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಬಹಳ ಕಡಿಮೆ ಇದೆ, ಶಿಕ್ಷಕರ ಕೊರತೆ ಕಾಡುತ್ತಿದೆ. ಪೂಕಳ, ಬಾಡಗರಕೇರಿ, ಕಲ್ಕೂರು, ತೆರಾಲು ಶಾಲೆಯಲ್ಲಿ ಮಕ್ಕಳ ಸಂಖ್ಯೆ ಬೆರಳೆಣಿಕೆಯಷ್ಟಿದ್ದು, ಶಾಲೆ ಯಾವಾಗ ಬೇಕಾದರೂ ಮುಚ್ಚುವ ಹಂತದಲ್ಲಿದೆ. ನಿಟ್ಟೂರು ಗ್ರಾಮದ ಮೂರ್ಕಲ್ಲು ಪ್ರಾಥಮಿಕ ಶಾಲೆಯಲ್ಲಿ ಇಡೀ ಶಾಲೆಗೆ ಒಬ್ಬ ವಿದ್ಯಾರ್ಥಿ, ಒಬ್ಬರು ಶಿಕ್ಷಕರು ಇದ್ದಾರೆ. ಗ್ರಾಮಕ್ಕೆ ಬಸ್‌ಗಳ ವ್ಯವಸ್ಥೆ ಇಲ್ಲದೆ ಇರುವುದೇ ಇದಕ್ಕೆ ಪ್ರಮುಖ ಕಾರಣ ಎನ್ನುವ ಅಂಶ ಬೆಳಕಿಗೆ ಬಂದಿದೆ ಎಂದರು.

ಕುಟ್ಟ, ಕಾನೂರು, ಬಿರುನಾಣಿ ಸಮುದಾಯ ಆಸ್ಪತ್ರೆಯಲ್ಲಿ ಮಂಜೂರು ಆಗಿರುವ ಸಂಖ್ಯೆಗಿAತ ಕಡಿಮೆ ವೈದ್ಯರು ಹಾಗೂ ನರ್ಸ್ಗಳು ಇದ್ದಾರೆ. ಇದರಿಂದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಲ್ಯಾಬ್ ಉಪಕರಣ ಇದ್ದರೆ ಟೆಕ್ನಿಷಿಯನ್ ಕೊರತೆ ಇದೆ. ಇದರ ಬಗ್ಗೆ ಮುಂದಿನ ದಿನಗಳಲ್ಲಿ ಸ್ಥಳೀಯ ಆಮ್ ಆದ್ಮಿ ಮುಖಂಡರು ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net