ಮೈಷುಗರ್ ಕಾರ್ಖಾನೆ ನಿರ್ಮಾಣ ಪಾರದರ್ಶಕವಾಗಿರಲಿ: ಆಪ್ ಜಿಲ್ಲಾಧ್ಯಕ್ಷ ಬೂದನೂರು ಬೊಮ್ಮಯ್ಯ ಸಲಹೆ

Aam Aadmi Party press conference mandya
Published on

ಮಂಡ್ಯ: ರಾಜ್ಯಸರ್ಕಾರ ಬಜೆಟ್‌ನಲ್ಲಿ ನೂತನ ಮೈಷುಗರ್ ಕಾರ್ಖಾನೆ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದೆ. ಈ ನಡುವೆ ಶಾಸಕ ರವಿಕುಮಾರ್ ಗಣಿಗ ಅವರು ಸಾತನೂರು ಫಾರ್ಮ್‌ನಲ್ಲಿ ಕಾರ್ಖಾನೆ ನಿರ್ಮಿಸಿ, ಮೈಷುಗರ್‌ಗೆ ಸೇರಿದ ಜಾಗದಲ್ಲಿ ಸಾಫ್ಟ್‌ವೇರ್ ಕಂಪನಿ ಮಾಡುವುದಾಗಿ ತಿಳಿಸಿದ್ದಾರೆ. ಇದು ಸರಿಯಾದ ನಿರ್ಧಾರವಲ್ಲ ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಬೂದನೂರು ಬೊಮ್ಮಯ್ಯ ಹೇಳಿದರು.

ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಹಾಲಿ ಇರುವ ಸ್ಥಳದಲ್ಲಿಯೇ ಹೊಸ ಕಾರ್ಖಾನೆ ನಿರ್ಮಾಣ ಮಾಡಲಿ. ಇದಕ್ಕೆ ಸರ್ಕಾರದಿಂದಲೇ ಪೂರ್ಣ ಅನುದಾನ ನೀಡಬೇಕು. ಆದರೆ ಎಲ್ಲವೂ ಪಾರದರ್ಶಕವಾಗಿರಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಮಾಡಲಾಗುವುದು. ಕಾರಣ, ಮೈಷುಗರ್ ಕಾರ್ಖಾನೆ ಆವರಣದಲ್ಲಿ ಸಾಫ್ಟ್‌ವೇರ್ ಕಂಪನಿ ಮಾಡುವುದಾಗಿ ಹೇಳಿ ಎಲ್ಲಿ ರಿಯಲ್ ಎಸ್ಟೇಟ್‌ಗೆ ಮಾರಾಟ ಮಾಡುತ್ತಿದ್ದಾರೆನ್ನುವ ಆತಂಕವಿದೆ. ಇದೇ ರೀತಿ ಅಸಿಟೇಟ್ ಕಾರ್ಖಾನೆಯನ್ನು ಕಳೆದುಕೊಂಡಿದ್ದೇವೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.

ಕೆಲ ವರ್ಷದಿಂದ ಈಚೆಗೆ ಜನಪ್ರತಿನಿಧಿಗಳು ಜಿಲ್ಲೆಯ ನಾಗರಿಕರನ್ನು ವಂಚಿಸುತ್ತಾ ಹಾಗೂ ಸರ್ಕಾರಿ ಸ್ವತ್ತುಗಳನ್ನು ಮಾರಾಟ ಮಾಡಿ ಅಕ್ರಮ ಲಾಭ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಲೋಕಸಭಾ ಚುನಾವಣೆ ಇರುವುದರಿಂದ ಜಿಲ್ಲೆಯ ಮತದಾರರಿಗೆ ಭರವಸೆ ಹಾಗೂ ಆಶ್ವಾಸನೆ ನೀಡಿ ಮತ ಪಡೆಯುವ ಹುನ್ನಾರವಾಗಿರಬಹುದೆಂಬ ಅನುಮಾನ ಕಾಡುತ್ತಿದೆ ಎಂದು ತಿಳಿಸಿದರು.

ಆಪ್‌ನ ಚಲುವರಾಜು, ದಿನೇಶ್, ಪುಟ್ಟಸ್ವಾಮಿ, ಸುರೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net