ತನ್ನೀರು ಸ್ನಾನ, ವಿದ್ಯಾರ್ಥಿಗಳೊಂದಿಗೆ ಉಪಹಾರ; ಸರ್ಕಾರಿ ಹಾಸ್ಟೆಲ್‌ನಲ್ಲಿ ತಂಗಿದ್ದ ಐಎಎಸ್ ಅಧಿಕಾರಿ ಮಣಿವಣ್ಣನ್

8 Dwd 8
Published on

ಧಾರವಾಡ: ಪಿ. ಮಣಿವಣ್ಣನ್… ಈ ಹೆಸರು ಕೇಳಿದರೆ ಸಾಕು. ಅವಳಿನಗರದಲ್ಲಿ ಅತಿಕ್ರಮಣ ಮಾಡಿಕೊಂಡಿದ್ದ ಅಂಗಡಿಕಾರರು ಇಂದಿಗೂ ಭಯ ಪಡುತ್ತಾರೆ. ಅವರು ಹು-ಧಾ ಪಾಲಿಕೆ ಆಯುಕ್ತರಾಗಿದ್ದಾಗ ನಡೆಸಿದ್ದ ಆಪರೇಶನ್ ಫುಟ್‌ಪಾತ್ ಕಾಮಗಾರಿಯ ಬಗ್ಗೆ ಸಾರ್ವಜನಿಜರು ಮೆಚ್ಚುಗೆಯ ಮಾತುಗಳನ್ನಾಡುತ್ತಾರೆ.
ಇಂಥ ಹಿರಿಯ ಐಎಎಸ್ ಅಧಿಕಾರಿ ಹಾಗೂ ಪ್ರಸ್ತುತ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ. ತಮ್ಮ ಸರಳತೆಯ ಗುಣದಿಂದ ಮತ್ತೊಮ್ಮೆ ಎಲ್ಲರ ಮನ ಗೆದ್ದಿದ್ದಾರೆ. ಇಲಾಖೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಬುಧವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಹೀಗಾಗಿ ಮಂಗಳವಾರವೇ ಹುಬ್ಬಳ್ಳಿಗೆ ಆಗಮಿಸಿದ್ದ ಮಣಿವಣ್ಣನ್ ಅವರು ಐಶಾರಾಮಿ ಹೋಟೆಲ್ ಅಥವಾ ಸರ್ಕಾರಿ ಅತಿಥಿ ಗೃಹದಲ್ಲಿ ಉಳಿದುಕೊಳ್ಳಲಿಲ್ಲ. ಬದಲಾಗಿ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿರುವ ಇಲಾಖೆಯ ಹಾಸ್ಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು.
ಬೆಳಗ್ಗೆ ಎದ್ದು ಸ್ನಾನಕ್ಕೆ ಹೋದಾಗ ಬಿಸಿನೀರು ಬಾದದಿದ್ದಾಗ ತನ್ನೀರು ಸ್ನಾನ ಮಾಡಿದ್ದಾರೆ. ನಂತರ ವಿದ್ಯಾರ್ಥಿಗಳೊಂದಿಗೆ ಬೆಳಗಿನ ಉಪಹಾರ ಸೇವಿಸಿದ್ದಾರೆ. ಬಳಿಕ ವಿದ್ಯಾರ್ಥಿಗಳೊಂದಿಗೆ ಕೆಲ ಹೊತ್ತು ಸಂವಾದ ನಡೆಸಿ ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ತಂದೆ- ತಾಯಿಗೆ ಹೆಸರು ತನ್ನಿ ಎಂದು ಶುಭ ಹಾರೈಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net