ಸಾಯಿಕುಮಾರ್ ಆಪ್ ಅಭ್ಯರ್ಥಿ

01mdk04 SAI KUMAR
Published on

ಮಡಿಕೇರಿ:
ಮಡಿಕೇರಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಯನ್ನಾಗಿ ಟಿ.ಕೆ. ಸಾಯಿಕುಮಾರ್ ಅವರನ್ನು ಕಣಕ್ಕಿಳಿಸಲಾಗುತ್ತಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಘೋಷಿಸಿದ್ದಾರೆ. ಈ ಸಂಬಂಧ ಶನಿವಾರ ಪ್ರಕಟಣೆ ನೀಡಿರುವ ಅವರು ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಬೆಂಗಳೂರಿನಲ್ಲಿ ಮಡಿಕೇರಿ ಕ್ಷೇತ್ರ ಸೇರಿದಂತೆ ೧೪೨ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದರು ಎಂದು ತಿಳಿಸಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸದ್ಯ್ಯದಲ್ಲೇ ಅಭ್ಯರ್ಥಿ ಘೋಷಿಸಲಾಗುವುದೆಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net