ಕೇಜ್ರಿವಾಲ್ ಮೇಲಿನ ಹಲ್ಲೆಗೆ ಎಎಪಿ ಖಂಡನೆ

APPAIHA
Published on

ಮಡಿಕೇರಿ: ದೆಹಲಿಯ ವಿಕಾಸ್ ಪುರಿ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಾರ್ಟಿಯ ನಾಯಕ ಅರವಿಂದ್ ಕೇಜ್ರಿವಾಲ್ ಆವರ ಮೇಲೆ ನಡೆದಿರುವ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ಪಕ್ಷದ ಕೊಡಗು ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಿಜೆಪಿ ಯುವ ಮೋರ್ಚಾದವರು ನಡೆಸಿರುವ ಹಲ್ಲೆಯನ್ನು ಯಾವುದೇ ನಾಗರಿಕ ಸಮಾಜ ಸಹಿಸಲು ಸಾಧ್ಯವಿಲ್ಲ. ಬಿಜೆಪಿ ನಾಯಕರುಗಳು ಹತಾಶೆಯಿಂದ ಈ ರೀತಿಯ ದಾಳಿಗೆ ಮುಂದಾಗಿದ್ದಾರೆ. ಪ್ರಾಮಾಣಿಕರು ಎಂದಿಗೂ ರಾಜಕೀಯ ಕ್ಷೇತ್ರಕ್ಕೆ ಪ್ರವೇಶ ಮಾಡಬಾರದು, ಜನಪರ ಆಡಳಿತವನ್ನು ನೀಡಬಾರದು ಎನ್ನುವುದು ಬಿಜೆಪಿಯ ಉದ್ದೇಶವಾಗಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಯಾಚಿಸಬೇಕು ಮತ್ತು ಹಲ್ಲೆ ನಡೆಸುವವರನ್ನು ಹತೋಟಿಯಲ್ಲಿಡಬೇಕೆಂದು ಆಗ್ರಹಿಸಿದ್ದಾರೆ.

ಕೇಜ್ರಿವಾಲ್ ಅವರ ಮೇಲಿನ ದಾಳಿ ಇದೇ ಮೊದಲಲ್ಲ. ಅನೇಕ ಬಾರಿ ಈ ರೀತಿಯ ದಬ್ಬಾಳಿಕೆ, ದೌರ್ಜನ್ಯ, ದಾಳಿ ನಡೆದಿದೆ. ಸುಳ್ಳು ಪ್ರಕರಣಗಳನ್ನು ದಾಖಲಿಸಿ ಆಮ್ ಆದ್ಮಿ ಪಾರ್ಟಿಯ ನಾಯಕರುಗಳನ್ನು ಜೈಲಿನಲ್ಲಿಟ್ಟರು ರಾಷ್ಟ್ರದ ಜನತೆ ನಮ್ಮೊಂದಿಗೆ ಇರುವುದನ್ನು ಸಹಿಸಲಾಗದೆ ಹತಾಶೆಯಿಂದ ಈ ರೀತಿಯ ದಾಳಿಗಳಿಗೆ ಬಿಜೆಪಿ ಮುಂದಾಗಿದೆ ಎಂದು ಮುಕ್ಕಾಟಿರ ಅಪ್ಪಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net