

ಹುಬ್ಬಳ್ಳಿ: ಇಲ್ಲಿಯ ರೈಲ್ವೆ ಸ್ಟೇಷನ್ ರಸ್ತೆಯ ಡಾ. ಅಂಬೇಡ್ಕರ್ ಪ್ರತಿಮೆ ಬಳಿ ಆಮ್ ಆದ್ಮಿ ಪಕ್ಷದಿಂದ ರಾಷ್ಟ್ರೀಯ ಸಂವಿಧಾನ ದಿನ ಹಾಗೂ ಪಕ್ಷದ ಸಂಸ್ಥಾಪನಾ ದಿನವನ್ನು ಭಾನುವಾರ ಆಚರಿಸಲಾಯಿತು.
ಹು-ಧಾ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆದಿರುವ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತೇವೆ ಎಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯ ಸಾಕ್ಷಿಯಾಗಿ ಪ್ರಮಾಣ ಮಾಡಿದರು.
ಸ್ಮಾರ್ಟ್ ಸಿಟಿ ಮಿಷನ್ನ ಜಾಲತಾಣದಲ್ಲಿ ಪ್ರಕಟಿಸಿದಂತೆ ಸಾವಿರ ಕೋಟಿ ರೂ. ಅನುದಾನದಲ್ಲಿ ಹು-ಧಾ ಅವಳಿ ನಗರದಲ್ಲಿ 62 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ 612 ಕೋಟಿ ರೂ. ವೆಚ್ಚದಲ್ಲಿ 57 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದರಲ್ಲಿ ಬಹಳಷ್ಟು ಕಾಮಗಾರಿಗಳು ಕಳಪೆಯಾಗಿವೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಪ್ರವೀಣಕುಮಾರ ನಡಕಟ್ಟಿನ ಹೇಳಿದರು.
ರೇವಣಸಿದ್ದಪ್ಪ ಹುಬ್ಬಳ್ಳಿ, ಶಾಮ ನರಗುಂದ, ಪ್ರತಿಭಾ ದಿವಾಕರ, ಎಂ.ಬಿ. ಹಿರೇಮಠ, ಹುಸೇನಸಾಬ ತಳೇವಾಡ, ಅವಿನಾಶ ಸದಾನಂದ, ಫಾರೂಖ ಶೇಖ್, ತಸ್ಮೀನ ತಲೇವಾಡ, ಪದ್ಮಾ ಹುಬ್ಲಿಕರ, ಇತರರು ಇದ್ದರು.