ಸರ್ವೇ ಪ್ರಕಾರ ದೆಹಲಿಯಲ್ಲಿ ಆಪ್ ಗೆಲುವು

minister santhosh lad
ಕಾರ್ಮಿಕ ಸಚಿವ ಸಂತೋಷ್ ಲಾಡ್
Published on

ಹುಬ್ಬಳ್ಳಿ: ಸಮೀಕ್ಷೆಗಳ ಪ್ರಕಾರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಪ್ರಥಮ ಸ್ಥಾನದಲ್ಲಿದೆ. ದ್ವಿತೀಯ ಸ್ಥಾನದಲ್ಲಿ ಬಿಜೆಪಿ ಇರಲಿದೆ. ನಮ್ಮ ಪಕ್ಷ (ಕಾಂಗ್ರೆಸ್) 5-10 ಸ್ಥಾನ ಗೆಲ್ಲಲಿದೆ ಎಂದು ಹೇಳುವ ಮೂಲಕ ಕಾರ್ಮಿಕ ಸಚಿವ ಸಂತೋಷ ಲಾಡ್ ಅಚ್ಚರಿಗೆ ಕಾರಣರಾದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಕುರಿತು ಸತ್ಯ ಹೇಳಬೇಕಾಗುತ್ತದೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನಮ್ಮ ದೇಶದ ಜನರು ಇನ್ನೂ ಅರ್ಥ ಮಾಡಿಕೊಂಡಿಲ್ಲ. ಅವರ ಫಿಲಾಸಫಿಯನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ನಾವು ಮಾಡುತ್ತಿಲ್ಲ. ಸಂಸತ್‌ನಲ್ಲಿ ರಾಹುಲ್‌ಗಾಂಧಿ ಬಹಳ ಚೆನ್ನಾಗಿ ಮಾತಾಡಿದ್ದಾರೆ. ಆದರೆ ಮಾಧ್ಯಮಗಳಲ್ಲಿ ಅದನ್ನು ತೋರಿಸುವುದಿಲ್ಲ. ಅದರ ಬಗ್ಗೆ ಎಲ್ಲಿಯೂ ಚರ್ಚೆ ಕೂಡ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬಿಜೆಪಿಯೊಳಗೆ ಮೋದಿ ಬದಲಾವಣೆ ಕುರಿತು ಚರ್ಚೆ ಆಗುತ್ತಿದೆ. ನರೇಂದ್ರ ಮೋದಿ ವಿರುದ್ಧ ಮಾತನಾಡಲು ಯಾರಿಗೂ ಧೈರ್ಯ ಇಲ್ಲ. ಸುಬ್ರಹ್ಮಣ್ಯ ಸ್ವಾಮಿ ಮಾತನಾಡಿರುವುದಕ್ಕೆ ಬಿಜೆಪಿಯವರು ಉತ್ತರ ಕೊಡುತ್ತಾರಾ ಎಂದು ಖಾರವಾಗಿ ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net