ಬೇಡಿಕೆ ಈಡೇರಿಕೆಗೆ ಆಶಾಗಳ ಮನವಿ

VM 13-7
Published on

ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆ ಕರೆ ಮೇರೆಗೆ ಜಿಲ್ಲೆ ಎಲ್ಲ ಆಶಾ ಕಾರ್ಯಕರ್ತೆಯರು ಆಯಾ ಗ್ರಾಪಂಗಳ ಮುಂದೆ ಸೋಮವಾರ ಪ್ರತಿಭಟನೆ ನಡೆಸಿ ಪಿಡಿಒಗಳಿಗೆ ಮನವಿ ಸಲ್ಲಿಸಿದರು.
ಅನಿರ್ದಿಷ್ಟ ಹೋರಾಟದ 4ನೇ ದಿನವಾದ ಸೋಮವಾರ ಜಿಲ್ಲೆಗಳ ಎಲ್ಲ ತಾಲೂಕುಗಳ ಗ್ರಾಪಂಗಳ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಗೆ ಒತ್ತಾಯಿಸಿ ಪಿಡಿಒಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಜು.14ರಂದು ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುವಂತೆ ಸಂಘದ ಜಿಲ್ಲಾ ಸಂಘಟನಕಾರ್ತಿ ಕಾಶಿಬಾಯಿ ಜಿ.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net