

ಕಡಬ: ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಮಾ.29ರಿಂದ ಏ.3ರ ತನಕ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.
ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬಲಡ್ಕ ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಮಾತನಾಡಿ, ಜಾತ್ರಾ ಮಹೋತ್ಸವ ಯಶಸ್ವಿಯಾಗಲು ಊರಿನ ಭಕ್ತರ ಸಹಕಾರ ಅಗತ್ಯವಾಗಿದೆ. ಕ್ಷೇತ್ರದ ಅಭಿವೃದ್ಧಿಯಲ್ಲೂ ಊರಿನ ಭಕ್ತರ ಪಾಲ್ಗೊಳ್ಳುವಿಕೆ ಇರಬೇಕೆಂದು ಹೇಳಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೀರಜ್ಕುಮಾರ್ ರೈ ಅರುವಾರ ಬಾಳಿಕೆ ಕಾರ್ಯಕ್ರಮದ ಯಶಸ್ವಿಗೆ ಎಲ್ಲರ ಸಹಕಾರ ಕೋರಿದರು. ದೇವಸ್ಥಾನದ ಪವಿತ್ರಪಾಣಿ ವೆಂಕಟ್ರಮಣ ಕುದ್ರೆತ್ತಾಯ, ಅರ್ಚಕರಾದ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ, ಸದಸ್ಯರಾದ ಯತೀಶ್ ಗುಂಡಿಜೆ, ಸುನೀತ್ರಾಜ್ ಶೆಟ್ಟಿ, ಸಂಜೀವ ಸುದೆಂಗಳ, ಸುಜಾತ ಜೆ.ಶೆಟ್ಟಿ, ಉತ್ಸವ ಸಮಿತಿಯ ಅಧ್ಯಕ್ಷ ಧರ್ಣಪ್ಪ ಗೌಡ ಕೋರಿಕ್ಕಾರು, ಪ್ರಧಾನ ಕಾರ್ಯದರ್ಶಿ ವಿನೋದ್ಕುಮಾರ್ ಪಲ್ಲಡ್ಕ, ವ್ಯವಸ್ಥಾಪನ ಸಮಿತಿ ನಿಕಟಪೂರ್ವ ಅಧ್ಯಕ್ಷ ಯದುಶ್ರೀ ಆನೆಗುಂಡಿ, ವಿವಿಧ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.