

ಸುಳ್ಯ: ತಾಲೂಕು ಗೌಡರ ಯುವ ಸೇವಾ ಸಂಘ ತಾಲೂಕು ಮಹಿಳಾ ಘಟಕ ಮತ್ತು ತರುಣ ಘಟಕ ಸುಳ್ಯ ನಗರ ಗೌಡ ಸಮಿತಿ, ಮಹಿಳಾ ಘಟಕ, ತರುಣ ಟಕ ಆಶ್ರಯದಲ್ಲಿ 13ನೇ ವರ್ಷದ ಆಟಿ ಸಂಭ್ರಮ ಸುಳ್ಯದ ಕೋಡಿಯಾಲಬೈಲಿನ ಗೌಡ ಸಮುದಾಯ ಭವನದಲ್ಲಿ ನಡೆಯಿತು.
ಸಮಾರೋಪ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಗೌಡರ ಯುವ ಸೇವಾ ಸಂಘ ನಗರ ಸಮಿತಿ ಅಧ್ಯಕ್ಷ ರಾಕೇಶ್ ಕುಂಟಿಕಾನ ಅಧ್ಯಕ್ಷತೆ ವಹಿಸಿದ್ದರು. ಆಟಿ ತಿಂಗಳ ಮಹತ್ವದ ಕುರಿತು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯ ಚಂದ್ರಶೇಖರ ಪೇರಾಲು ಉಪನ್ಯಾಸ ನೀಡಿದರು.
ಕಲ್ಕುಡ ದೈವಸ್ಥಾನ ಆಡಳಿತ ಧರ್ಮದರ್ಶಿ ಉಮೇಶ್ ಪಿ.ಕೆ. ಸನ್ಮಾನ ನೆರವೇರಿಸಿದರು. ಗೌಡರ ಯುವ ಸೇವಾ ಸಂಘ ಮಾಜಿ ಅಧ್ಯಕ್ಷ ದಿನೇಶ್ ಮಡಪ್ಪಾಡಿ ಅಭಿನಂದನಾ ಭಾಷಣ ಮಾಡಿದರು. ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಸಿ.ಸದಾನಂದ ಅತಿಥಿಯಾಗಿದ್ದರು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಕೇಶವ ಸುಳ್ಳಿ, ಎಂ.ಡಿ.ನಿರಂಜನ್, ನವೀತ್ ಕಂದಡ್ಕ, ಡಾ.ಅಭಿಜ್ಞಾ, ತಿಮ್ಮಪ್ಪ ಗೌಡ ನಾವೂರು, ಮಾಯಿಲಪ್ಪ ಗೌಡ ಸೂಂತೋಡು, ಸೋನಾ ಅಡ್ಕಾರ್, ಭೂಮಿಕಾ ಅವರನ್ನು ಸನ್ಮಾನಿಸಲಾಯಿತು.
ಗೌಡರ ಯುವ ಸೇವಾ ಸಂಘ ಪ್ರಧಾನ ಕಾರ್ಯದರ್ಶಿ ತೀರ್ಥರಾಮ ಅಡ್ಕಬಳೆ, ತಾಲೂಕು ತರುಣ ಘಟಕ ಅಧ್ಯಕ್ಷ ಪ್ರೀತಮ್ ಡಿ.ಕೆ., ತಾಲೂಕು ಮಹಿಳಾ ಟಕ ಅಧ್ಯಕ್ಷೆ ವಿನುತಾ ಪಾತಿಕಲ್ಲು, ನಗರ ಸಮಿತಿ ಕಾರ್ಯದರ್ಶಿ ರಾಧಾಕೃಷ್ಣ, ಕುಂತಿನಡ್ಕ ಮಹಿಳಾ ನಗರ ಘಟಕ ಅಧ್ಯಕ್ಷೆ ಹರ್ಷಾ ಕರುಣಾಕರ, ಕಾರ್ಯದರ್ಶಿ ಸುಜಾತಾ ಕಿರಣ ಕುರುಂಜಿ ಮೊದಲಾದವರಿದ್ದರು. ಐ.ಬಿ.ಚಂದ್ರಶೇಖರ ಸ್ವಾಗತಿಸಿದರು. ಡಿ.ಟಿ.ದಯಾನಂದ ವಂದಿಸಿದರು. ಲತಾಶ್ರೀ ಸುಪ್ರೀತ್ ಮೋಟಂಡ್ಕ ನಿರೂಪಿಸಿದರು.
ವಿವಿಧ ರೀತಿಯ ಸ್ಪರ್ಧೆ
ಬೆಳಗ್ಗೆ ಕೊಡಿಯಾಲಬೈಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ರಾಮಕೃಷ್ಣ ಅಮೈ ಸ್ಪರ್ಧಾಕೂಟವನ್ನು ಉದ್ಘಾಟಿಸಿದರು. ಗೌಡರ ಯುವ ಸೇವಾ ಸಂಘ ಅಧ್ಯಕ್ಷ ಪಿ.ಎಸ್.ಗಂಗಾಧರ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳು ಮಹಿಳೆಯರು ಹಾಗೂ ಪುರುಷರು ಸೇರಿದಂತೆ ಎಲ್ಲಾ ವಯೋಮಾನದವರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.