ಆರಾಧನಾ ಕ್ರಮ ಹಿರಿಯರಿಂದ ದೊರೆತ ಬಳುವಳಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

banta
ಕಾಪು ಬಂಟರ ಸಂಘದ ಮಹಿಳಾ ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ದಿವಾಕರ ಶೆಟ್ಟಿ ಮಲ್ಲಾರು, ಕೆ.ವಾಸುದೇವ ಶೆಟ್ಟಿ ಮೊದಲಾದವರಿದ್ದರು.
Published on

ವಿಜಯವಾಣಿ ಸುದಿಜಾಲ ಪಡುಬಿದ್ರಿ

ಪುರಾತನ ಕಾಲದ ಆಹಾರ ಪದ್ಧತಿ ಮತ್ತು ಸಂಸ್ಕೃತಿಯ ಬಗ್ಗೆ ಮಕ್ಕಳಿಗೆ ಮನದಟ್ಟು ಮಾಡುವುದಕ್ಕಾಗಿ ಹೆಚ್ಚು ಆಟಿಡೊಂಜಿ ದಿನ ಕಾರ್ಯಕ್ರಮ ಏರ್ಪಡಿಸಬೇಕು. ಹಿರಿಯರು ಬಳುವಳಿಯಾಗಿ ಕೊಟ್ಟ ಆರಾಧನಾ ಕ್ರಮದಿಂದ ಮುಂದಿನ ಪೀಳಿಗೆಗೆ ಅನುಕೂಲವಾಗಲಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಭಿಪ್ರಾಯಪಟ್ಟರು.

ಕಾಪು ಬಂಟರ ಸಂಘ ಆಶ್ರಯದಲ್ಲಿ ಕಾಪು ಬಂಟರ ಮಹಿಳಾ ಘಟಕ ನೇತೃತ್ವದಲ್ಲಿ ಕಾಪು ಶ್ರೀ ಲಕ್ಷ್ಮೀ ಜರ್ನಾದನ ಸಭಾಂಗಣದಲ್ಲಿ ಭಾನುವಾರ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉದ್ಯಮಿ ದಿವಾಕರ ಶೆಟ್ಟಿ ಮಲ್ಲಾರು ಕಾರ್ಯಕ್ರಮ ಉದ್ಘಾಟಿಸಿದರು. ಕಾಪು ಬಂಟರ ಸಂಘ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಉದಯ ಸುಂದರ್ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ರವಿರಾಜ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಕೋಶಾಧಿಕಾರಿ ರತ್ನಾಕರ್ ಹೆಗ್ಡೆ, ಜತೆ ಕೋಶಾಧಿಕಾರಿ ದಿವಾಕರ ಬಿ. ಶೆಟ್ಟಿ ಕಳತ್ತೂರು, ಬಂಟರ ಯುವ ಘಟಕದ ಅಧ್ಯಕ್ಷ ರಘುರಾಮ ಶೆಟ್ಟಿ ಕೊಪ್ಪಲಂಗಡಿ, ದಿವಾಕರ ಡಿ.ಶೆಟ್ಟಿ, ಪ್ರಭಾತ್ ಶೆಟ್ಟಿ ಮೂಳೂರು ಉಪಸ್ಥಿತರಿದ್ದರು.

ಯೋಗಿಶ್ ವಿ.ಶೆಟ್ಟಿ ಪ್ರಸ್ತಾವನೆಗೈದರು. ಮಹಿಳಾ ಘಟಕ ಸಂಚಾಲಕಿ ಜಯಲಕ್ಷ್ಮೀ ಎಸ್.ಶೆಟ್ಟಿ ಸ್ವಾಗತಿಸಿದರು. ಅರ್ಚನಾ ಶೆಟ್ಟಿ ವಂದಿಸಿದರು. ಪ್ರತಿಮಾ ಆರ್. ಶೆಟ್ಟಿ, ಅನಿತಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

2023-24ನೇ ಸಾಲಿನ ಎಸ್ಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ರಾಧಾ ಸುಂದರ್ ಶೆಟ್ಟಿಯವರ ಸ್ಮರಣಾರ್ಥ ಉದ್ಯಮಿ ಮನೋಹರ ಶೆಟ್ಟಿ ವಿದ್ಯಾರ್ಥಿವೇತನ ವಿತರಿಸಿದರು. ಎಸ್ಸೆಸೆಲ್ಸಿಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗೆ ಡಾ.ಪ್ರಭಾಕರ್ ಶೆಟ್ಟಿ ಸ್ಮರಣಾರ್ಥ ಡಾ.ಪ್ರಶಾಂತ್ ಶೆಟ್ಟಿ ಬಂಗಾರದ ಪದಕ ನೀಡಿ ಗೌರವಿಸಿದರು. ನೀಟ್‌ನಲ್ಲಿ ಸಾಧನೆ ಮಾಡಿದ ಮಕ್ಕಳು ಹಾಗೂ ಹಿರಿಯ ಕೃಷಿಕೆ ಜಯಲಕ್ಷ್ಮೀ ಆಳ್ವ ಅವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net