

ಮೂಲ್ಕಿ: ಮಕ್ಕಳ ಸಮಗ್ರ ಅಭಿವೃದ್ಧಿಯಲ್ಲಿ ತಾಯಿಯ ಪಾತ್ರ ಮಹತ್ವದ್ದು, ಎದೆಹಾಲು ಸರಿಯಾಗಿ ನೀಡುವ ಮುಖಾಂತರ ಮಕ್ಕಳಲ್ಲಿ ಉತ್ತಮ ಬೆಳವಣಿಗೆ ಸಾಧ್ಯ ಎಂದು ಅತಿಕಾರಿಬೆಟ್ಟು ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಹೇಳಿದರು.
ಅತಿಕಾರಿಬೆಟ್ಟು ಪಂಚಾಯಿತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೋಷಣ್ ಅಭಿಯಾನ ಯೋಜನೆಯಡಿಯಲ್ಲಿ ಪೌಷ್ಟಿಕ ಆಹಾರದ ಪ್ರಾತ್ಯಕ್ಷಿತೆ ಹಾಗೂ ವಿಶ್ವ ಸ್ತನ್ಯಪಾನ ದಿನ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ.ಶೋಭರಾಣಿ ಮತ್ತು ಅದಾನಿ ಫೌಂಡೇಶನ್ ವೈದ್ಯಾಧಿಕಾರಿ ಡಾ.ಪ್ರೇಮಾ ಡಿಸೋಜ ಮಾಹಿತಿ ನೀಡಿದರು. ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಭಾನುಮತಿ ಶೆಟ್ಟಿ ಮಹಿಳಾ ಸಂಘಟನೆ ಬಗ್ಗೆ ಮಾತನಾಡಿದರು.
ಉಪಾಧ್ಯಕ್ಷ ಮನೋಹರ ಕೋಟ್ಯಾನ್, ಸದಸ್ಯರಾದ ಜಯಕುಮಾರ್ ಮಟ್ಟು, ವೇದಾವತಿ ಗೀತಾ, ಪಿಡಿಒ ಶೈಲಜ, ಕಾರ್ಯದರ್ಶಿ ಮಂಜುನಾಥ್, ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಭಾರತಿ, ಸಿಎಚ್‌ಒ ವಿಲ್ಮಾ, ಸಿಸ್ಟರ್ ಸುಮಾ, ಕಿಲ್ಪಾಡಿ ಮತ್ತು ಅತಿಕಾರಿಬೆಟ್ಟು ಪಂಚಾಯಿತಿ ವ್ಯಾಪ್ತಿಯ ಸ್ತ್ರೀ ಶಕ್ತಿ ಗುಂಪಿನ ಸದಸ್ಯರು ಹಾಜರಿದ್ದರು.