

ಮಂಗಳೂರು :್ಲ ಕೇರ್ ಇನ್ಸೂರೆನ್ಸ್ ಕಂಪೆನಿಯ ರಿಟೇಲ್ ಬಿಸಿನೆಸ್‌ನಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿದ ಹಾಗೂ ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರಿಗೆ ಕೇರ್ ಇನ್ಸೂರೆನ್ಸ್ ಕಂಪೆನಿಯ ಮುಖ್ಯಸ್ಥ ಶರ್ಮಿಲ್ ಮೋದಿ ಪ್ರಶಸ್ತಿ ನೀಡಿ ಗೌರವಿಸಿದರು.
ನೆದರ್‌ಲ್ಯಾಂಡ್‌ನ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ನಡೆದ ಕೇರ್ ಇನ್ಸೂರೆನ್ಸ್ ಕಂಪೆನಿಯ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಶಸ್ತಿ ವಿತರಿಸಲಾಯಿತು.
ಕೇರ್ ಇನ್ಸೂರೆನ್ಸ್ ಕಂಪೆನಿಯ ವಲಯ ಮುಖ್ಯಸ್ಥ ಜಗದೇವ್ ಸಿಂಗ್, ಹರಿಂದಾಮ್ ಸಿನ್ಹ ಉಪಸ್ಥಿತರಿದ್ದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯ ಜತೆಗೆ ಆರೋಗ್ಯ ಪೂರ್ಣ ಸ್ವಸ್ಥ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದೆ. ಸಂಘದ ಎಲ್ಲ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭ
ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಿದೆ. ಸಂಘವು ಇದುವರೆಗೆ ಒಟ್ಟು 63 ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿದ್ದು, ಈ ಶಿಬಿರಗಳಲ್ಲಿ ಕಡು ಬಡವರಿಗೆ ಉಚಿತ ಔಷದಿ ವಿತರಣೆ, ಆರೋಗ್ಯ ತಪಾಸಣೆ, ದಂತ ತಪಾಸಣೆ ಮತ್ತು ಚಿಕಿತ್ಸೆ, ಉಚಿತ ಆರೋಗ್ಯ ಕಾರ್ಡ್ ವಿತರಣೆ, 400ಕ್ಕೂ ಮಿಕ್ಕಿ ಕಣ್ಣಿನ ಶಸ್ತ್ರಚಿಕಿತ್ಸೆ ಹಾಗೂ 14,000ಕ್ಕೂ ಮಿಕ್ಕಿ ಉಚಿತ ಕನ್ನಡಕ ವಿತರಣೆಯನ್ನು ಮಾಡಲಾಗಿದೆ. ವಿಮಾ ಕ್ಷೇತ್ರದ 8ಕ್ಕೂ ಅಧಿಕ ಕಂಪೆನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಆರೋಗ್ಯ, ವಾಹನ ಹಾಗೂ ಜೀವ ವಿಮಾ ಸೇವೆಯನ್ನು ಸಂಘದ ಸದಸ್ಯರಿಗೆ ಸ್ಮರ್ಧಾತಕ ದರದಲ್ಲಿ ಒದಗಿದಿಎ. ಹೆಚ್ಚಿನ ಗ್ರಾಹಕರು ಇದರ ಪ್ರಯೋಜನವನ್ನು ಪಡೆದಿದ್ದಾರೆ. ಸಂಘವು ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಸತತ 8 ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆದಿರುವ ಸಂಸ್ಥೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.