ಸದಾಶಿವ ಆಯೋಗದ ವರದಿ ಜಾರಿ ಕೈಬಿಡಿ

20-12-Shiva-4
ಸದಾಶಿವ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಾರಸ್ಸು ಮಾಡಬಾರದು ಎಂದು ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ಬುಧವಾರ ಮನವಿ ಸಲ್ಲಿಸಲಾಯಿತು. ಒಕ್ಕೂಟದ ಅಧ್ಯಕ್ಷ ಈರಣ್ಣ ಬೋವಿ, ಪದಾಕಾರಿಗಳಾದ ಎಂ.ಶಂಕರ ಚವ್ಹಾಣ, ಶಶಿಕಲಾ ಭೀಮರಾಯ, ವೇಣುಗೋಪಾಲ, ಆನಂದ, ನರಸಿಂಹಲು, ವೌನೇಶ, ಹನುಮಂತ, ಶಿವಣ್ಣ, ಮಾಲಾ ಭಜಂತ್ರಿ ಇದ್ದರು.
Published on

ರಾಯಚೂರು: ಕೆಲ ಸಮುದಾಯಗಳಿಗೆ ಓಲೈಕೆ ಮಾಡಲು ಇನ್ನುಳಿದ ಸಮುದಾಯಗಳಿಗೆ ಅನ್ಯಾಯ ಮಾಡುವಂತಿರುವ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಾರಸ್ಸು ಮಾಡಬಾರದು ಎಂದುಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಒತ್ತಾಯಿಸಿದೆ.
ಒಕ್ಕೂಟದ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಬುಧವಾರ ಮನವಿ ಸಲ್ಲಿಸಿ, ವರದಿ ಜಾರಿ ಮೂಲಕ ಮೀಸಲಾತಿ ಹಕ್ಕನ್ನು ಅಭದ್ರಗೊಳಿಸುವ ಹುನ್ನಾರ ನಡೆದಿದ್ದು, ಬಂಜಾರ, ಬೋವಿ, ಕೊರಚ, ಕೊರಮ, ಅಲೆಮಾರಿಗಳನ್ನು ಮೀಸಲಾತಿ ಹಕ್ಕಿನಿಂದ ವಂಚಿತರನ್ನಾಗಿ ಮಾಡಲು ಪ್ರಯತ್ನಗಳು ನಡೆದಿವೆ ಎಂದು ದೂರಿದರು.
ಅವೈಜ್ಞಾನಿಕ ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಪರಿಶಿಷ್ಟ ಜಾತಿಗಳನ್ನು ವರ್ಗೀಕರಿಸಿ ಮೀಸಲಾತಿ ಹಂಚಿಕೆ ಮಾಡಲು ಹೊರಟಿರುವ ಸರ್ಕಾರದ ತೀರ್ಮಾನವನ್ನು ಈಗಾಗಲೇ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ಸರ್ಕಾರ ನ್ಯಾಯಾಲಯಕ್ಕೆ ತನ್ನ ಅಭಿಪ್ರಾಯ ಸಲ್ಲಿಸುವುದು ಬಾಕಿಯಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಸಮುದಾಯಗಳ ಹಿತ ಕಾಪಾಡುತ್ತೇನೆ ಎಂದು ಹೇಳುತ್ತಾ ಸದಾಶಿವ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಾರಸ್ಸು ಮಾಡಲು ಮುಂದಾಗಿದ್ದು, ಕೂಡಲೇ ಅದನ್ನು ಕೈಬಿಟ್ಟು ವರದಿಯನ್ನು ತಿರಸ್ಕರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಒಕ್ಕೂಟದ ಅಧ್ಯಕ್ಷ ಈರಣ್ಣ ಬೋವಿ, ಪದಾಕಾರಿಗಳಾದ ಎಂ.ಶಂಕರ ಚವ್ಹಾಣ, ಶಶಿಕಲಾ ಭೀಮರಾಯ, ವೇಣುಗೋಪಾಲ, ಆನಂದ, ನರಸಿಂಹಲು, ವೌನೇಶ, ಹನುಮಂತ, ಶಿವಣ್ಣ, ಮಾಲಾ ಭಜಂತ್ರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net