ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಬ್ಬಯ್ಯ ಸೂಚನೆ

h2-abbayya
filter: 101; fileterIntensity: 0.8; filterMask: 0; captureOrientation: 0; module: photo; hw-remosaic: false; touch: (-1.0, -1.0); modeInfo: ; sceneMode: 8; cct_value: 5468; AI_Scene: (-1, -1); aec_lux: 188.0; aec_lux_index: 0; hist255: 0.0; hist252~255: 0.0; hist0~15: 0.0; albedo: ; confidence: ; motionLevel: 0; weatherinfo: null; temperature: 40;
Published on

ಹುಬ್ಬಳ್ಳಿ: ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಶಾಸಕ ಹಾಗೂ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೂರ್ವ ಕ್ಷೇತ್ರದ ಬಾಣತಿಕಟ್ಟಿ ಮುಖ್ಯರಸ್ತೆ, ಹಣಪಿಟೌನ್ ಮತ್ತು ಈಶ್ವರ ನಗರದಲ್ಲಿ ನಡೆದಿರುವ ಅಂದಾಜು 10 ಕೋಟಿ ರೂ.ಗೂ ಹೆಚ್ಚು ಅನುದಾನದ ಅಭಿವೃದ್ಧಿ ಕಾಮಗಾರಿ ಭಾನುವಾರ ವೀಕ್ಷಿಸಿ ಅವರು ಮಾತನಾಡಿದರು.

ಪೂರ್ವ ಕ್ಷೇತ್ರದಲ್ಲಿ ನಿರಂತರವಾಗಿ ಅಭಿವೃದ್ಧಿ ಕಾರ್ಯ ನಡೆಯುತ್ತಿವೆ. ಕಾಮಗಾರಿಗಳ ಗುಣಮಟ್ಟದ ಬಗ್ಗೆ ಎಚ್ಚರ ವಹಿಸಬೇಕು. ಕಳಪೆ ಕಾಮಗಾರಿ ಕಂಡುಬಂದಲ್ಲಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವುದಲ್ಲದೇ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.

ಕುಡಿಯುವ ನೀರು, ಒಳಚರಂಡಿ ಸೇರಿ ಅಗತ್ಯ ಸೌಲಭ್ಯ ಒದಗಿಸುವ ಕಾರ್ಯವಾಗಬೇಕು. ಜನರ ಸಮಸ್ಯೆಗೆ ಶೀಘ್ರವೇ ಸ್ಪಂದಿಸಬೇಕು. ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಆದ್ಯತೆ ಮೇರೆ ಸೌಕರ್ಯ ಒದಗಿಸಲಾಗುತ್ತದೆ. ಸರ್ಕಾರದಲ್ಲಿ ಅನುದಾನಕ್ಕೆ ಕೊರತೆಯೇ ಇಲ್ಲ. ಅಭಿವೃದ್ಧಿ ಕಾರ್ಯಕ್ಕಾಗಲಿ, ಮೂಲ ಸೌಕರ್ಯಕ್ಕಾಗಲಿ ಅಗತ್ಯ ಪ್ರಸ್ತಾವನೆ ಸಲ್ಲಿಸಿದರೆ, ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಲಾಗುವುದು ಎಂದು ಪ್ರಸಾದ ಅಬ್ಬಯ್ಯ ಹೇಳಿದರು.

ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯಕುಮಾರ್, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net