

ಮೈಸೂರು: ಆಲನಹಳ್ಳಿ ಸಮೀಪ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರವನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ.
ಲಲಿತಮಹಲ್ ನಗರದ ಆಶ್ರಯ ಬಡಾವಣೆ ನಿವಾಸಿ ದೀಪಿಕಾ ಎಂಬುವರು ಸೆ.5ರ ಸಂಜೆ 6.45ರ ಹೊತ್ತಿನಲ್ಲಿ ಕೆಲಸ ಮುಗಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದರು.
ಈ ಸಂದರ್ಭದಲ್ಲಿ ಹಿಂದಿನಿಂದ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು 3 ಲಕ್ಷ ರೂ. ಮೌಲ್ಯದ 65 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.