ಅಬ್ದುಲ್ ರಫೀಕ್ ರಾಜ್ಯಮಟ್ಟಕ್ಕೆ ಆಯ್ಕೆ

3
Published on

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರ್ಕಾರಿ ನೌಕರರ ಸಂಘ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 13,14ರಂದು ಮಂಗಳ ಕ್ರೀಡಾಂಗಣದಲ್ಲಿ ಜರುಗಿದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ಪುರುಷರ ವಿಭಾಗದ ಶಾಟ್ ಪುಟ್, ಹ್ಯಾಮರ್ ಥ್ರೋ, ಮತ್ತು ವಾಲಿಬಾಲ್‌ನಲ್ಲಿ ಗಮನಾರ್ಹ ಸಾಧನೆ ತೋರಿದ ದೈಹಿಕ ಶಿಕ್ಷಣ ಶಿಕ್ಷಕ ಅಬ್ದುಲ್ ರಫೀಕ್ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಲ್ಲಡ್ಕ ನಾರ್ಶದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದಾರೆ. ಮೂಲತಃ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ನಿವಾಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net