ಮರದ ಅಂಬಾರಿ ಹೊತ್ತು ಸಾಗಿದ ಅಭಿಮನ್ಯು

25
Published on

ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿ ಮೆರವಣಿಗೆಯ ಪ್ರಮುಖ ಆಕರ್ಷಣೆಯಾದ ಗಜಪಡೆ, ಮರದ ಅಂಬಾರಿ ಹೊರುವ ತಾಲೀಮಿಗೆ ಸೋಮವಾರ ಚಾಲನೆ ದೊರೆಯಿತು.

ಮಳೆಯ ನಡುವೆಯೂ ಮೊದಲ ದಿನ ಅಂಬಾರಿ ಆನೆ ಅಭಿಮನ್ಯು 280 ಕೆ.ಜಿ. ತೂಕದ ಮರದ ಅಂಬಾರಿ, 400 ಕೆ.ಜಿ. ಮರಳಿನ ಮೂಟೆ ಸೇರಿದಂತೆ ಒಟ್ಟು 750 ಕೆಜಿಗೂ ಅಧಿಕ ಭಾರ ಹೊತ್ತು ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ (5 ಕಿಮೀ) ಯಶಸ್ವಿಯಾಗಿ ಹೆಜ್ಜೆ ಹಾಕಿದ.

ಸಂಜೆ 6.30ಕ್ಕೆ ಅರಮನೆ ಆವರಣ ಬಿಟ್ಟ ಅಭಿಮನ್ಯು 7.40ರ ವೇಳೆಗೆ ಬನ್ನಿಮಂಟಪ ತಲುಪಿದ. 1 ಗಂಟೆ 10 ನಿಮಿಷದಲ್ಲಿ ಗುರಿ ಮುಟ್ಟಿ ಎಲ್ಲರನ್ನೂ ಬೆರಗುಗೊಳಿಸಿದ. ಈ ಮೂಲಕ ಪ್ರಸಕ್ತ ವರ್ಷವೂ ಅಂಬಾರಿ ಹೊರಲು ತಾನು ಸಮರ್ಥನಿದ್ದೇನೆ ಎಂಬ ಸಂದೇಶ ನೀಡಿದ.

ಅಭಿಮನ್ಯು ಮರದ ಅಂಬಾರಿ ಹೊತ್ತು ಗಾಂಭೀರ್ಯದಿಂದ ಮುಂದೆ ನಡೆದರೆ, ಆತನ ಪಕ್ಕ ಕುಮ್ಕಿ ಆನೆಗಳಾದ ವರಲಕ್ಷ್ಮೀ, ವಿಜಯಾ ಸಾಥ್ ನೀಡಿದವು. ಅಲ್ಲದೆ ಅರ್ಜುನ, ಕಂಜನ್, ಭೀಮ, ಗೋಪಿ, ಧನಂಜಯ, ಮಹೇಂದ್ರ, ಪ್ರಶಾಂತ, ಸುಗ್ರೀವ, ರೋಹಿತ್, ಹಿರಣ್ಯಾ ಹಾಗೂ ಲಕ್ಷ್ಮೀ ಆನೆಗಳು ತಾಲೀಮಿನಲ್ಲಿ ಹೆಜ್ಜೆ ಹಾಕಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net