ನಟರಾಜ ಎಂ.ಎಸ್. ಸಾರ್ವಜನಿಕ ಅಭಿನಂದನೆ

10
Published on

ವಿಜಯವಾಣಿ ಸುದ್ದಿಜಾಲ ಸುಳ್ಯ

ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 30 ವರ್ಷ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನಟರಾಜ್ ಎಂ.ಎಸ್. ಅವರಿಗೆ ಸಾರ್ವಜನಿಕ ಅಭಿನಂದನೆ ಬುಧವಾರ ನೆರವೇರಿತು.

ಅಭಿನಂದನಾ ಸಮಾರಂಭ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಅಧ್ಯಕ್ಷತೆ ವಹಿಸಿದ್ದರು. ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್, ಡಾ.ನಟರಾಜ ಎಂ.ಎಸ್. ಅವರನ್ನು ಅಭಿನಂದಿಸಿದರು. ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಮುಸ್ತಫಾ ಅಭಿನಂದನಾ ಭಾಷಣ ಮಾಡಿದರು. ತಾಪಂ ಇಒ ರಾಜಣ್ಣ, ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ, ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಭಟ್ ಕೊಡೆಂಕಿರಿ, ನಿವೃತ್ತ ಉಪನ್ಯಾಸಕ ಲಿಂಗಪ್ಪ ಗೌಡ ಕೇರ್ಪಳ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಕಾಡುತೋಟ, ನಗರ ಪಂಚಾಯಿತಿ ಸದಸ್ಯರಾದ ಡೇವಿಡ್ ಧೀರಾ ಕ್ರಾಸ್ತ, ಎಂ.ವೆಂಕಪ್ಪ ಗೌಡ, ಶರೀಫ್ ಕಂಠಿ, ರಿಯಾಝ್ ಕಟ್ಟೆಕ್ಕಾರ್, ಸಿದ್ದಿಕ್ ಕೊಕ್ಕೊ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಡಾ.ನಿತಿನ್ ಪ್ರಭು, ಜನಾರ್ದನ ಮಾಸ್ತರ್, ಗಣಿತ ಅಧ್ಯಯನ ಕೇಂದ್ರದ ಡಾ.ಜ್ಞಾನೇಶ್ ಎನ್.ಎ., ಸುಳ್ಯ ಎಸ್‌ಐ ಸಂತೋಷ್ ಕುಮಾರ್, ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್ ಉಪಸ್ಥಿತರಿದ್ದರು. ನಟರಾಜ ಎಂ.ಎಸ್. ಅವರನ್ನು ಗೌರವಿಸಲಾಯಿತು. ಪೂಜಾಶ್ರೀ ಪ್ರಾರ್ಥನೆ ಮಾಡಿದರು. ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಪಿ.ಬಿ.ಸುಧಾಕರ ರೈ ಸ್ವಾಗತಿಸಿದರು. ಶಿಕ್ಷಕಿ ಚಂದ್ರಮತಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net