ಕಾವೇರಿ ಮಾತೆ ಪ್ರತಿಮೆಗೆ ಹಾಲಿನ ಅಭಿಷೇಕ

20-06--krs1 (1)
Published on

ಕೆ.ಆರ್.ಸಾಗರ: ಕೆ.ಆರ್.ಸಾಗರದ ಬೃಂದಾವನದ ಪ್ರವೇಶ ದ್ವಾರದ ಬಳಿ ಇರುವ ಕಾವೇರಿ ಮಾತೆ ಪ್ರತಿಮೆಗೆ ರಸ್ತೆ ಬದಿ ವ್ಯಾಪಾರಿಗಳ ಸರ್.ಎಂ.ವಿಶ್ವೇಶ್ವರಯ್ಯ ರಸ್ತೆ ಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಬುಧವಾರ ಬೆಳಗ್ಗೆ ಹಾಲಿನ ಅಭಿಷೇಕ ನೆರವೇರಿಸಲಾಯಿತು.\


20ನೇ ವರ್ಷದ ಕಾರ್ಯಕ್ರಮದ ಅಂಗವಾಗಿ ಬೃಂದಾವನದಲ್ಲಿರುವ ಕಾವೇರಿ ಮಾತೆಯ ಪ್ರತಿಮೆಗೆ ಅರ್ಚಕ ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಅರ್ಚಕರ ತಂಡ ಪೂಜಾ ಕೈಂಕರ್ಯಗಳನ್ನು ನೆರವೇರಿಸಿತು. 101 ಲೀಟರ್ ಹಾಲು, ಮೊಸರು ಬಳಸಿ ಪಂಚಾಮೃತ ಅಭಿಷೇಕ ಮಾಡಲಾಯಿತು. ನಂತರ ಕಾವೇರಿ ಮಾತೆ ಪ್ರತಿಮೆಯನ್ನು ಹೂಗಳಿಂದ ವಿಶೇಷವಾಗಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ಮಹಾ ಮಂಗಳಾರತಿ ನೆರವೇರಿಸಿದ ಸಂಘದ ವತಿಯಿಂದ ಎಲ್ಲರಿಗೂ ಪ್ರಸಾದ ವಿನಿಯೋಗ ಮಾಡಲಾಯಿತು. ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್.ಎಂ.ವಿಶ್ವೇಶ್ವರಯ್ಯ ಭಾವಚಿತ್ರಕ್ಕೆ ವ್ಯಾಪಾರಿಗಳು ಪೂಜೆ ಸಲ್ಲಿಸಿದರು.


ಸಂಘದ ಅಧ್ಯಕ್ಷ ನಾರಾಯಣ, ಉಪಾಧ್ಯಕ್ಷ ರಫೀಕ್, ಸದಸ್ಯರಾದ ಪುರುಷೋತ್ತಮ್, ರವೀಶ್, ಮೋಹನ, ಪ್ರಮೋದ, ಪಳನಿಯಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net