

ಬೆಳಗಾವಿ: ಪ್ರಸ್ತುತ ದಿನಗಳಲ್ಲಿ ಸಾಮರ್ಥ್ಯ ಆಧಾರಿತ ವೈದ್ಯಕೀಯ ಶಿಕ್ಷಣ ಪಠ್ಯಕ್ರಮದ ಅಗತ್ಯತೆ ಹೆಚ್ಚಿದೆ ಎಂದು ಕೆಎಲ್‌ಇ ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಉಪಪ್ರಾಂಶುಪಾಲ ಡಾ.ವಿ.ಎಂ.ಪಟ್ಟಣಶೆಟ್ಟಿ ಹೇಳಿದರು.
ನಗರದ ಕೆಎಲ್‌ಇ ಸಂಸ್ಥೆಯ ಜೆಎನ್‌ಎಂಸಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪಠ್ಯಕ್ರಮ ಅನುಷ್ಠಾನ ಬೆಂಬಲ, ಅಧ್ಯಾಪಕರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ವೈದ್ಯಕೀಯ ಶಿಕ್ಷಣದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಪ್ರಾಧ್ಯಾಪಕರು ಸಂದರ್ಭಕ್ಕೆ ತಕ್ಕಂತೆ ಬದಲಾಗಬೇಕು. ನಿರಂತರ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಕಾರ್ಯಚಟುವಟಿಕೆಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಾಗಾರದಲ್ಲಿ ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ವಿವಿಧ ವೈದ್ಯಕೀಯ ಕಾಲೇಜುಗಳ ಪ್ರಾಧ್ಯಾಪಕರು ಭಾಗವಹಿಸಿದ್ದರು. ಬಿಸಿಎಂಇ ಸಹ ಸಂಚಾಲಕಿ ಡಾ.ದೀಪ್ತಿ ಕಡೆಅಂಗಡಿ, ವೈದ್ಯಕೀಯ ಶಿಕ್ಷಣ ವಿಭಾಗ ಮುಖ್ಯಸ್ಥೆ ರೂಪಾ ಬೆಲ್ಲದ, ಎಂಇಯು ಕೋ-ಆರ್ಡಿನೇಟರ್ ಡಾ.ಭಾಗ್ಯಶ್ರೀ ಹುನಗುಂದ , ಸಹ ಸಂಚಾಲಕಿ ಡಾ.ನಯನಾ ಹಾಶಿಲ್ಕರ, ಡಾ.ಪದ್ಮಜಾ ವಾಳ್ವೇಕರ, ಡಾ.ಸುನೀತಾ ಪಾಟೀಲ, ಡಾ.ಜ್ಯೋತಿ ನಾಗಮೋತಿ, ಡಾ.ಜಯಶೀಲಾ ಬಾಗಿ ಇತರರಿದ್ದರು.