

ರಾಯಚೂರು: ನೌಕರರಿಗೆ ಮಾರಕವಾಗಿರುವ ಎನ್‌ಪಿಎಸ್ ಪದ್ಧತಿಯನ್ನು ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ನಗರದ ತಹಸೀಲ್ ಕಚೇರಿಯಿಂದ ಬೈಕ್ ರ‌್ಯಾಲಿ ಮೂಲಕ ಜಿಲ್ಲಾಕಾರಿ ಕಚೇರಿಗೆ ಆಗಮಿಸಿ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಮಹ್ಮದ್ ಆಸ್ೀಗೆ ಮನವಿ ಸಲ್ಲಿಸಿ, ಎನ್‌ಪಿಎಸ್ ಜಾರಿಯಿಂದ ಸರ್ಕಾರಿ ನೌಕರರಿಗೆ ನಿವೃತ್ತಿ ನಂತರ ಆರ್ಥಿಕ ಭದ್ರತೆ ಇಲ್ಲದಂತಾಗಿದ್ದು, ಕುಟುಂಬ ನಿರ್ವಹಣೆಗೆ ಸಮಸ್ಯೆ ಎದುರಿಸುವಂತಾಗಿದೆ ಎಂದು ದೂರಿದರು.
ಪಿಎ್, ಆರ್‌ಡಿಎ ಕಾಯ್ದೆ ರದ್ದುಗೊಳಿಸಬೇಕು. 7ನೇ ವೇತನ ಆಯೋಗದ ವರದಿಯನ್ನು ಅನುಷ್ಠಾನಗೊಳಿಸಬೇಕು. ಹೊರ ಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು. ಕೋವಿಡ್ ಸಂದರ್ಭದಲ್ಲಿ ಮುಟ್ಟುಗೋಲು ಹಾಕಿಕೊಂಡಿರುವ 18 ತಿಂಗಳ ತುಟ್ಟಿ ಭತ್ಯೆಯನ್ನು ನೀಡಬೇಕು.
ಕೇಂದ್ರ ಮತ್ತು ರಾಜ್ಯದ ವಿವಿಧ ಇಲಾಖೆಗಳಲ್ಲಿ 60 ಲಕ್ಷ ಹುದ್ದೆಗಳು ಖಾಲಿಯಿದ್ದು, ಖಾಲಿ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಒಕ್ಕೂಟದ ರಾಜ್ಯಾಧ್ಯಕ್ಷ ಎಚ್.ಎಸ್.ಜೈಕುಮಾರ, ಜಿಲ್ಲಾಧ್ಯಕ್ಷ ತಾಯರಾಜ್ ಮರ್ಚೆಟಹಾಳ, ಪದಾಕಾರಿಗಳಾದ ಶೋಭಾ, ಅಮರೇಶಪ್ಪ, ನಾರಾಯಣಪ್ಪ, ಮೊಹಿನುದ್ದೀನ್, ಗುರುನಾಥ, ರಮೇಶ ಗೌಳಿ, ಸುಧಾಕರ, ಮಹಾದೇವಪ್ಪ, ಮಧುಕಾಂತ, ವೆಂಕಟೇಶ, ರಾಘವೇಂದ್ರ, ಹೃಷಿಕೇಶ, ನಾಗರಾಜ, ಸತ್ಯನಾರಾಯಣ ಪಾಲ್ಗೊಂಡಿದ್ದರು.