ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ

14bhr 5
ಬಾಳೆಹೊನ್ನೂರಲ್ಲಿ ನಡೆದ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸಕ ಕೆ.ಎಂ.ರಾಕೇಶ್ ಮಾತನಾಡಿದರು. ಕೆ.ಆರ್.ಬೂದೇಶ್, ಕುಮಾರ ಚಂದ್ರ ನಾಯಕ್, ಆಯಿಷಾ ಇದ್ದರು.
Published on

ಬಾಳೆಹೊನ್ನೂರು: ಬಾಲಕಾರ್ಮಿಕ ಪದ್ಧತಿ ತೊಡೆದು ಹಾಕಲು ಪ್ರತಿಯೊಬ್ಬರು ಜಾಗೃತರಾಗಬೇಕು ಎಂದು ಎಸ್‌ಜೆಆರ್ ಕಾಲೇಜು ಉಪನ್ಯಾಸಕ ಕೆ.ಎಂ.ರಾಕೇಶ್ ಹೇಳಿದರು.
ಪಟ್ಟಣದ ಎಸ್‌ಜೆಆರ್ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಉದ್ಯಮ, ವ್ಯವಹಾರಗಳಲ್ಲಿ ಬಾಲ ಕಾರ್ಮಿಕರನ್ನು ಬಳಸಿಕೊಳ್ಳದೆ ಅವರು ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳುವಂತೆ ಮಾಡಬೇಕಿದೆ. ಬಾಲ ಕಾರ್ಮಿಕ ಪದ್ಧತಿ ಕಾನೂನು ವಿರೋಧಿಯಾಗಿದೆ. ಈ ಬಗ್ಗೆ ಎಲ್ಲ ಕಡೆ ಜಾಗೃತಿ ಮೂಡಿಸಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿ ಆಯಿಷಾ ಬಾಲ ಕಾರ್ಮಿಕ ವಿರೋಧಿ ದಿನದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಾಚಾರ್ಯ ಕೆ.ಆರ್.ಬೂದೇಶ್, ಹಿರಿಯ ಶಿಕ್ಷಕ ಬಿ.ಎಸ್.ಕುಮಾರಚಂದ್ರನಾಯಕ್ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net