

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ "ಸಿ' ವೃಂದದ ಬೋಧಕೇತರ ನೌಕರರಿಗೆ ಶನಿವಾರ (ಜ.28)ನಡೆಸಲು ಉದ್ದೇಶಿಸಿದ್ದ ಕಾರ್ಯಕ್ಷಮತೆ ಪರೀೆ ರದ್ದುಪಡಿಸುವಂತೆ ಸರ್ಕಾರ ಸೂಚನೆ ನೀಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯು "ಸಿ' ವೃಂದದ ಬೋಧಕೇತರ ನೌಕರರಲ್ಲಿ ಕಾರ್ಯಕ್ಷಮತೆ ಮತ್ತು ವಿಷಯ ಪರಿಣಿತಿ ಹೆಚ್ಚಿಸುವ ಉದ್ದೇಶದಿಂದ ಈಗಾಗಲೆ ತರಬೇತಿ ನೀಡಿದ್ದು, ಜ.28ರಂದು ಆಯುಕ್ತಾಲಯದಿಂದ ನಡೆಸಲು ಉದ್ದೇಶಿಸಿದೆ. ಆದರೆ, ಈ ಪರೀೆಯಿಂದ ತಮ್ಮ ಮನೋಬಲ ಕುಗ್ಗಲಿದೆ ಎಂದು ಹಲವು ಹಿರಿಯ ಸಿಬ್ಬಂದಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ಷಮತೆ ಪರೀೆಯನ್ನು ಈ ಕೂಡಲೇ ರದ್ದುಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಸೂಚಿಸಿದ್ದಾರೆ.
ಏನೀದು ಪರೀಕ್ಷೆ?: ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧೀಕ್ಷಕರು, ಪ್ರಥಮ ಮತ್ತು ದ್ವೀತಿಯ ದರ್ಜೆ ಸಹಾಯಕರು ಹಾಗೂ ಇತರೆ ಸಿಬ್ಬಂದಿಯಲ್ಲಿ ಕಾರ್ಯಕ್ಷಮತೆ ಹೆಚ್ಚಿಸುವ ಉದ್ದೇಶದಿಂದ ತರಬೇತಿ ನೀಡಿ ಪರೀೆ ನಡೆಸಲು ಉದ್ದೇಶಿಸ ಲಾಗಿತ್ತು. ಶೇ.60ಕ್ಕಿಂತ ಕಡಿಮೆ ಅಂಕ ಪಡೆಯುವ ಸಿಬ್ಬಂದಿಗೆ ತರಬೇತಿ ನೀಡಿ ಕಾರ್ಯ ಕ್ಷಮತೆ ಹೆಚ್ಚಿಸುವ ಉದ್ದೇಶ ಹೊಂದಲಾಗಿತ್ತು. ಪರೀೆ ಉತ್ತರ ಪತ್ರಿಕೆಗಳನ್ನು ಮತ್ತೊಂದು ಜಿಲ್ಲೆಯ ಡಯಟ್ ಪ್ರಾಂಶುಪಾಲರಿಂದ ಮೌಲ್ಯಮಾಪನ ಮಾಡಿಸಲು ನಿರ್ಧರಿಸಿತ್ತು.