ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೈದಿ ಕೊನೆಗೂ ಪೊಲೀಸ್ ವಶ

mng--20 Aug nawffal
Published on

ಮಂಗಳೂರು: ಅನಾರೋಗ್ಯದಿಂದ ನಗರ ವೆನ್ಲಾಕ್‌ನಲ್ಲಿರುವ ಕೈದಿಗಳ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು ಪಾಂಡೇಶ್ವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಬಂಟ್ವಾಳ ತಾಲೂಕು ಸಜಿಪ ನಡು ನಿವಾಸಿ ನೌಾಲ್ (32) ಬಂಧಿತ ಕೈದಿ.


ಪ್ರಕರಣ ವಿವರ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎನ್‌ಡಿಪಿಎಸ್ ಕಾಯಿದೆಯಡಿ ಬಂಧಿತನಾಗಿದ್ದ ನೌಾಲ್ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ. ಈತನನ್ನು ಅನಾರೋಗ್ಯದ ಕಾರಣದಿಂದ ಪೊಲೀಸ್ ಭದ್ರತೆಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ.16ರಂದು ಸಂಜೆ ವೇಳೆಗೆ ಪೊಲೀಸ್ ಭದ್ರತೆ ಬೇಧಿಸಿ ಪರಾರಿಯಾಗಿದ್ದ. ಈ ಬಗ್ಗೆ ಪಾಂಡೇಶ್ವರ ಪೊಲೀಸರು ದೂರು ದಾಖಲಿಸಿ ತನಿಖೆ ನಡೆಸಿದ್ದು, ಆರೋಪಿಯನ್ನು ಆ.19ರಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಪೊಲೀಸರಲ್ಲಿ ಗೊಂದಲ ಮೂಡಿಸಿದ ಪ್ರಕರಣವೊಂದು ಸುಖಾಂತ್ಯ ಕಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net