ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

New Project (22)
Published on

ಉಪ್ಪಿನಂಗಡಿ: ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಕಾಸರಗೋಡಿನ ಮಂಜೇಶ್ವರ ನಿವಾಸಿ ಯತಿರಾಜ್ (34) ಬಂಧಿತ. ಪ್ರಕರಣವೊಂದಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು 2022ರಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಈತ ಮತ್ತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಪುತ್ತೂರು, ಬಂಟ್ವಾಳ ನಗರ, ವೇಣೂರು ಪೊಲೀಸ್ ಠಾಣೆಯಲ್ಲಿ ವಾಹನ ಕಳವು ಪ್ರಕರಣ ಹಾಗೂ ಕೊಣಾಜೆ, ಕಾವೂರು, ವಿಟ್ಲ ಠಾಣೆಗಳಲ್ಲಿ ಇತರೇ ಪ್ರಕರಣಗಳು ಸೇರಿದಂತೆ ಒಟ್ಟು 7 ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net