‘ ಸ್ವರಾಜ್ಯ-ಸುರಾಜ್ಯ’ ಕವಿಗೋಷ್ಠಿ ಕವಿಗಳಿಂದ ಸಮಾಜಕ್ಕೆ ಸದ್ವಿಚಾರದ ಸಂದೇಶ ಬೆಸೆಂಟ್ ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್‌ಕುಮಾರ್ ಶೆಟ್ಟಿ ಆಶಯ

ddddddddddd
Published on



ಮಂಗಳೂರು : ಕವಿಗಳು ತಮ್ಮ ಕವನಗಳ ಮೂಲಕ ಸಮಾಜಕ್ಕೆ ಸದ್ವಿಚಾರದ ಸಂದೇಶವನ್ನು ಪಸರಿಸಬೇಕು. ಯುವ ಮನಸ್ಸುಗಳಲ್ಲಿ ಉತ್ತಮ ಭಾವನೆ ಮೂಡಿಸಲು ಪ್ರಯತ್ನಿಸಬೇಕು ಎಂದು ಬೆಸೆಂಟ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್‌ಕುಮಾರ್ ಶೆಟ್ಟಿ.ಪಿ. ಹೇಳಿದರು.
ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಬೆಸೆಂಟ್ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ ಕಾಲೇಜು ಸಭಾಂಗಣದಲ್ಲಿ ಗುರುವಾರ ನಡೆದ ‘ಸ್ವರಾಜ್ಯ-ಸುರಾಜ್ಯ’ ಕವಿಗೋಷ್ಠಿ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸ್ವಾತಂತ್ರೃ ಹೋರಾಟಕ್ಕೆ ದೇಶಭಕ್ತಿಯ ಗೀತೆಗಳು ಹೆಚ್ಚಿನ ಪ್ರೇರಣೆ ನೀಡಿದ್ದವು ಎಂದರು.
ಮಹಿಳಾ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಜತೆ ಕಾರ್ಯದರ್ಶಿ ಡಾ.ಅರ್ಜುನ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಅಭಾಸಾಪ ದ.ಕ.ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಅಭಾಸಾಪ ಕಾರ್ಯದರ್ಶಿ ಪರಿಮಳ ರಾವ್ , ಉಪಾಧ್ಯಕ್ಷೆ ವೀಣಾ ಶೆಟ್ಟಿ, ಕೋಶಾಧಿಕಾರಿ ಭಾಸ್ಕರ ರೈ ಕಟ್ಟ, ಜತೆ ಕಾರ್ಯದರ್ಶಿ ಶ್ರೀಲಕ್ಷ್ಮಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಜಯಾನಂದ ಪೆರಾಜೆ, ಕೃಷ್ಣ.ಡಿ.ಎಸ್. ಉಪಸ್ಥಿತರಿದ್ದರು.
ಬೆಸೆಂಟ್ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಗಿರಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು.
40ಕ್ಕೂ ಅಧಿಕ ಕವಿಗಳು ಸ್ವರಚಿತ ಕವನ ವಾಚಿಸಿದರು. ಭಾಗವಹಿಸಿದ ಕವಿಗಳಿಗೆ ಅಭಾಸಾಪ ವಲಯ ಸಂಚಾಲಕ ಸುಂದರ ಶೆಟ್ಟಿ ಅವರು ಅಭಿನಂದನಾ ಪತ್ರ ವಿತರಿಸಿದರು. ಕನ್ನಡ ಉಪನ್ಯಾಸಕ ರವಿರಾಜ್.ಎಸ್. ವಂದಿಸಿದರು. ಗೀತಾ ಲಕ್ಷ್ಮೀಶ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net