ಸಾಹಿತ್ಯದಿಂದ ಸಮಾಜಕ್ಕೆ ಉತ್ತಮ ಸಂದೇಶ - ಸಿಎ ಎಸ್.ಎಸ್.ನಾಯಕ್

mng-29july-absp
Published on


ಮಂಗಳೂರು : ಸಾಹಿತ್ಯ ಹಾಗೂ ಸಂಗೀತದ ಅಭಿರುಚಿ ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಸಾಹಿತಿಗಳು ಧನಾತ್ಮಕ ಅಂಶಗಳಿಗೆ ಒತ್ತು ನೀಡಬೇಕು. ಸಾಹಿತ್ಯದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಪಸರಿಸಬೇಕು ಎಂದು ಕವಿ, ಸಾಹಿತಿ ಸಿಎ ಎಸ್.ಎಸ್.ನಾಯಕ್ ಹೇಳಿದರು.
ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವತಿಯಿಂದ ನಗರದ ಸಂಘನಿಕೇತನದಲ್ಲಿ ನಡೆದ ಮಂಗಳೂರು ವಿಭಾಗ ಮಟ್ಟದ ಅಭ್ಯಾಸ ವರ್ಗದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ‘ ಸಾಹಿತ್ಯ ಅಧ್ಯಯನದಿಂದ ಜ್ಞಾನ ಸಂಪಾದನೆ ಜತೆಗೆ ವ್ಯಕ್ತಿತ್ವದ ಪರಿಪೂರ್ಣತೆ ಸಾಧ್ಯವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಅಭಾಸಾಪ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ ಮಾತನಾಡಿ ‘ಸಾಹಿತ್ಯ ಜನತೆಯನ್ನು ಸುಲಭವಾಗಿ ತಲುಪಿಸುವ ಮಾಧ್ಯಮವಾಗಿದೆ. ಸಾಹಿತ್ಯ ಸಂಘಟನೆಯ ಮೂಲಕ ಎಲ್ಲರನ್ನು ಒಂದಾಗಿಸುವುದು ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನಧ್ಯೇಯವಾಗಿದೆ ಎಂದರು.
ಸಾಹಿತಿ ಉಂಡೆಮನೆ ಶಂ.ವಿಶ್ವೇಶ್ವರ ಭಟ್ ಅವರು ತಮ್ಮ ‘ರಾಮಾಯಣ ಹಕ್ಕಿನೋಟ ’ ಕೃತಿಯ ಬಗ್ಗೆ ಮಾಹಿತಿ ನೀಡಿದರು.
ಅಭಾಸಾಪ ರಾಜ್ಯ ಕಾರ್ಯದರ್ಶಿ ಶೈಲೇಶ್ ಕುಲಾಲ್, ದ.ಕ.ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಬಿ.ಹರೀಶ್ ರೈ , ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ್, ಉಡುಪಿ ಜಿಲ್ಲಾ ಸಮಿತಿ ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಉಪಸ್ಥಿತರಿದ್ದರು. ಅಭಾಸಾಪ ವಿಭಾಗ ಸಂಯೋಜಕ ಸುಂದರ ಶೆಟ್ಟಿ ಸ್ವಾಗತಿಸಿ, ಜಿಲ್ಲಾ ಸಮಿತಿಯ ಖಜಾಂಜಿ ಭಾಸ್ಕರ ರೈ ಕಟ್ಟ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net