

ಪಾವಗಡ: ನರೇಗಾ ಯೋಜನೆಯಡಿಯಲ್ಲಿ ಕಾಮಗಾರಿ ನೀಡುವಂತೆ ತಾಲೂಕಿನ ಕೊಡಮಡಗು ಗ್ರಾಪಂ ಪಿಡಿಒಗೆ ಗ್ರಾಮೀಣ ಕೂಲಿ ಕಾರ್ಮಿಕರ ಸಂಟನೆಯ ಕಾರ್ಯಕರ್ತೆಯರು ಶುಕ್ರವಾರ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ಮಹಿಳಾ ಕಾರ್ಮಿಕ ಕಾರ್ಯಕರ್ತೆ ಮಮತಾ, ತಾಲೂಕಿನಲ್ಲಿ ಕಳೆದ ಆರು ತಿಂಗಳಿಂದ ನರೇಗಾ ಯೋಜನೆ ಅಡಿಯಲ್ಲಿ ಕಾಮಗಾರಿ ಇಲ್ಲದೆ ಕೂಲಿ ಕಾರ್ಮಿಕರು ಪರದಾಡುವಂತಾಗಿದೆ. ತಾಲೂಕಿನ 53 ಹಳ್ಳಿಗಳಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕಾಮಗಾರಿಗಳು ನೀಡುವಂತೆ ಒತ್ತಾಯಿಸಿ, ಗ್ರಾಪಂ ಪಿಡಿಒ ಹಾಗೂ ತಾಪಂ ಇಒ ಅವರಿಗೆ ಮನವಿ ಸಲ್ಲಿಸಿದ್ದರೂ ಕೇವಲ 13 ಗ್ರಾಮಗಳಲ್ಲಿ ಕೆಲಸ ನೀಡಿ ಉಳಿದ ಗ್ರಾಮಗಳ ಕೂಲಿ ಕಾರ್ಮಿಕರಿಗೆ ಹೆಚ್ಚುವರಿ ಕಾಮಗಾರಿಗಳನ್ನು ಸೃಷ್ಟಿಸಿ ಕೆಲಸ ನೀಡುವಲ್ಲಿ ವಿಫಲರಾಗಿದ್ದಾರೆ. ಇದರಿಂದ ತಾಲೂಕಿನಲ್ಲಿ ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದೆ ಪರದಾಡುವಂತಾಗಿದೆ ಎಂದು ದೂರಿದರು.
ಕಳೆದ ಮೂರು ದಿನದ ಹಿಂದೆ ಪಳವಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಕಾಮಗಾರಿಯನ್ನು ಜೆಸಿಬಿ ಮೂಲಕ ಕೆಲಸ ನಿರ್ವಹಿಸುತ್ತಿರುವುದಿಂದ ಕೂಲಿ ಕಾರ್ಮಿಕರಿಗೆ ತೊಂದರೆ ಆಗುತ್ತಿದೆ ಎಂದು ತಾಪಂ ಇಒ ಬಿ.ಕೆ.ಉತ್ತಮ ಅವರಿಗೆ ಹೇಳಲು ಹೋದಾಗ ಮಹಿಳಾ ಕೂಲಿ ಕಾರ್ಮಿಕರಿಗೆ ಅವಷ್ಯ ಶಬ್ದ ಬಳಕೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿದರು.