

ವಿಜಯವಾಣಿ ಸುದ್ದಿಜಾಲ ಧಾರವಾಡ
ಕೊಲ್ಕತ್ತಾದಲ್ಲಿ ಸ್ನಾತಕೋತ್ತರ ಟ್ರೆÊನಿ ವೈದ್ಯೆಯ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿವಿಧ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವಿದ್ಯಾರ್ಥಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಜಿಲ್ಲಾಽಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಽಸಬೇಕು ಎಂದು ಆಗ್ರಹಿಸಿದರು. ವೈದ್ಯ ದೇವರಿಗೆ ಸಮಾನ ಎಂಬ ಮಾತಿದೆ. ಆದರೆ, ಕೊಲ್ಕತ್ತಾದ ವೈದ್ಯಕೀಯ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ತರಬೇತಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಇದು ಮಾನವೀಯ ಸಮಾಯ ತಲೆತಗ್ಗಿಸುವಂಥ ವಿಚಾರ. ಅಲ್ಲಿನ ಸರ್ಕಾರ ಹಿಂದಿನ ಹಲವು ಪ್ರಕರಣಗಳ ಆರೋಪಿಗಳ ಬೆನ್ನಿಗೆ ನಿಂತಿರುವ ಉದಾಹರಣೆ ಇದೆ. ಪಶ್ಚಿಮ ಬಂಗಾಳ ಸರ್ಕಾರದ ಮೃದು ಧೋರಣೆಯಿಂದ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಮರುಕಳಿಸುತ್ತಿವೆ. ಕೂಡಲೇ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಎಬಿವಿಪಿ ಪದಾಽಕಾರಿಗಳಾದ ಅರುಣ ಅಮರಗೋಳ, ಮುರಳಿ ಶೆಟ್ಟಿ, ಮಣಿಕಂಠ ಕಳಸ, ವಿದ್ಯಾನಂದ ಸ್ಥಾವರಮಠ, ಮೌಳಿತೇಜ, ಉಲ್ಲಾಸ ಗೋಡಿ, ವಿಜಯ ಹಾಗೂ ಮಹಾಗಣಪತಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.