ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಒತ್ತಾಯ

web 4
Published on

ಧಾರವಾಡ: ವಿದ್ಯಾರ್ಥಿಗಳಿಗೆ ಬಸ್ ಸೂಕ್ತ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.
ಜೂನ್‌ನಿಂದ ಶೈಕ್ಷಣಿಕ ವರ್ಷ ಪಾರಂಭವಾಗಿರುವುದರಿಂದ ಎಲ್ಲ ವಿದ್ಯಾರ್ಥಿಗಳು ಶಾಲೆ- ಕಾಲೇಜುಗಳಿಗೆ ಹಾಜರಾಗುತ್ತಿದ್ದಾರೆ.  ಹಳ್ಳಿಗಳಿಂದ ಪಟ್ಟಣದ ಕಾಲೇಜುಗಳಿಗೆ ವಿದ್ಯಾಭ್ಯಾಸಕ್ಕೆ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಎದುರಾಗಿದೆ. ಕಾಂಗ್ರೆಸ್ ಸರ್ಕಾರವು ‘ಶಕ್ತಿ’ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಪ್ರಯಾಣ ೋಷಿಸಿರುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಶಾಲೆ- ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಮಸ್ಯೆ ಎದುರಾಗಿದೆ. ಕೂಡಲೇ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕು ಹಾಗೂ ಶಾಲೆ- ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಅರುಣ ಅಮರಗೋಳ, ಉಲ್ಲಾಸ ಗೋಡಿ, ವಿದ್ಯಾನಂದ ಸ್ಥಾವರಮಠ, ಭೀಮಣ್ಣ ಸುಣಗಾರ, ಪ್ರತೀಕ ಅಗಡಿ, ಸಚಿನ್ ಹೀರೆಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net