

ಉಡುಪಿ: ರಾಜ್ಯ ಸರ್ಕಾರ ಶಿಕ್ಷಣವನ್ನು ಸ್ವಾರ್ಥ ಸಾಧನೆಗೆ ಬಳಸಬಾರದು. ಎನ್ಇಪಿ ರದ್ದತಿ ಬಗ್ಗೆ ಪರಾಮರ್ಶೆ ನಡೆಸಬೇಕು. ಸಣ್ಣಪುಟ್ಟ ಲೋಪಗಳನ್ನು ಸರಿಪಡಿಸಿಕೊಂಡು ಜಾರಿಗೊಳಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಕಾರ್ಯದರ್ಶಿ ಶ್ರೀವತ್ಸ ಡಿ. ಗಾಂವ್ಕರ್ ಆಗ್ರಹಿಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರ ಮೂಲಕ ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವರಿಗೆ ಮನವಿಯನ್ನು ನೀಡಲಾಯಿತು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕರಾದ ಗಣೇಶ್ ಪೂಜಾರಿ, ತಾಲೂಕು ಸಂಚಾಲಕ ಅಜಿತ್ ಜೋಗಿ, ಸಹ ಕಾರ್ಯದರ್ಶಿ ಕಾರ್ತಿಕ್, ಭಾವನಾ, ನಗರ ವಿದ್ಯಾರ್ಥಿನಿ ಸಹ-ಪ್ರಮುಖ್ ಕೃತಿ ಮತ್ತು ಪ್ರಮುಖರಾದ ಸ್ವಸ್ತಿಕ್, ಕಿಶೋರ್, ನವೀನ್, ಪ್ರಸನ್ನ, ಭೂಷಣ್, ಅಕ್ಷಯ್ ಹೆಗ್ಡೆ, ಮಹೇಶ್ ಉಪಸ್ಥಿತರಿದ್ದರು.