ವಿವಿ ಮುಚ್ಚಲು ಹೊರಟ ಸರ್ಕಾರ,  ಎಬಿವಿಪಿ ಪ್ರತಿಭಟನೆ

Published on

ಹುಬ್ಬಳ್ಳಿ: ಕೆಲ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಫೆ. 17ರಂದು ರಾಜ್ಯಾದ್ಯಂತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನೇತೃತ್ವದ ಸಚಿವ ಸಂಪುಟ ಉಪಸಮಿತಿಯು ಆರ್ಥಿಕ ಹಾಗೂ ಮೂಲ ಸೌಲಭ್ಯಗಳ ನೆಪ ಹೇಳಿ ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಶಿಕ್ಷಣ ವಿರೋಧಿ ನೀತಿಯಾಗಿದೆ.
ಸಾಮಾನ್ಯವಾಗಿ 10 ಸಾವಿರ ವಿದ್ಯಾರ್ಥಿಗಳಿಗೆ ಒಂದು ವಿಶ್ವವಿದ್ಯಾಲಯ ಇರಬೇಕೆಂಬುವುದು ಆದರ್ಶ ವಿಚಾರವಾಗಿದೆ.

ಆದರೆ, ನಮ್ಮಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಹೋಲಿಕೆ ಮಾಡಿದರೆ ಈಗಿರುವ ವಿಶ್ವವಿದ್ಯಾಲಯಗಳ ಸಂಖ್ಯೆ ಕಡಿಮೆ. ವಿದ್ಯಾರ್ಥಿಗಳ ಅಂಕಪಟ್ಟಿ, ಪ್ರಮಾಣ ಪತ್ರ ಹಾಗೂ ಇತರ ಸಮಸ್ಯೆಗಳ ಪರಿಹಾರಕ್ಕೆ ಸುಮಾರು 200 ಕಿ.ಮೀ. ಪ್ರಯಾಣ ಮಾಡಬೇಕು, ಇಂತಹ ಸಮಸ್ಯೆ ಪರಿಹಾರಕ್ಕೆ ಹೊಸ ವಿವಿಗಳು ಸಹಕಾರಿಯಾಗಬೇಕು. ಯಾವುದೇ ಸರ್ಕಾರಗಳು ಘೋಷಣೆ ಮಾಡಿದ ವಿಶ್ವವಿದ್ಯಾಲಯಗಳನ್ನು ಅಭಿವೃದ್ಧಿಪಡಿಸಬೇಕೆ ಹೊರತು ಅತಂತ್ರಗೊಳಿಸಬಾರದು.

ರಾಜ್ಯ ಸರ್ಕಾರ ಕೂಡಲೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರದಿಂದ ಹಿಂದೆ
ಸರಿದು ಮೂಲ ಸೌಲಭ್ಯಕ್ಕೆ ಅನುದಾನ ನೀಡುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net