

ಬೆಂಗಳೂರು: ಸಿಇಟಿಯಲ್ಲಿ 50ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆ ಕೇಳಿರುವುದರಿಂದ ಉಂಟಾಗಿರುವ ವಿದ್ಯಾರ್ಥಿಗಳು ಹಾಗೂ ಪಾಲಕರಲ್ಲಿ ಉಂಟಾಗಿರುವ ಗೊಂದಲ, ಆತಂಕ ನಿವಾರಣೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಸೋಮವಾರ ಮಲ್ಲೇಶ್ವರಂನ ಕೆಇಎ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಕಚೇರಿ ಮುಂದೆ ದೊಡ್ಡ ಮಟ್ಟದಲ್ಲಿ ಸಮಾವೇಶಗೊಳ್ಳುವ ಎಬಿವಿಪಿ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಈ ಗೊಂದಲಕ್ಕೆ ಕಾರಣರಾಗಿರುವ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಲಿದ್ದಾರೆ.