ಬಸ್​ಗಳ ಸಂಖ್ಯೆ ಹೆಚ್ಚಿಸುವಂತೆ ಎಬಿವಿಪಿ ಪ್ರತಿಭಟನೆ

6-SGN-1-ABVP -Protest
Published on

 ಶಿಗ್ಗಾಂವಿ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ ಅವ್ಯವಸ್ಥೆ ಮತ್ತು ಬಸ್ ಪ್ರಯಾಣ ದರ ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರ ಖಂಡಿಸಿ ಶಿಗ್ಗಾಂವಿ ತಾಲೂಕಿನ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಶಕ್ತಿ ಯೋಜನೆಯಿಂದಾಗಿ ನಿತ್ಯ ಬಸ್​ಗಳಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಅದರೆ, ಸರ್ಕಾರ ಬಸ್​ಗಳ ಸಂಖ್ಯೆ ಹೆಚ್ಚಳ ಮಾಡಿಲ್ಲ. ಇದರಿಂದ ಶಾಲೆ-ಕಾಲೇಜ್​ಗೆ ತೆರಳುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.

ಜನಸಾಮಾನ್ಯರಿಗೆ ಹೊರೆಯಾಗುವಂತೆ ಸರ್ಕಾರ ಬಸ್ ಪ್ರಯಾಣ ದರವನ್ನು ಶೇ. 15ರಷ್ಟು ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಹೊರೆ ಹೇರಿದೆ. ಸರ್ಕಾರ ಕೂಡಲೇ ಪ್ರಯಾಣ ದರ ಕಡಿಮೆ ಮಾಡಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬಸ್​ಗಳನ್ನು ಗ್ರಾಮೀಣ ಪ್ರದೇಶಗಳಿಗೆ ಬಿಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ತಹಸೀಲ್ದಾರ್ ಗಣೇಶ ಸವಣೂರ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿ ಸರ್ಕಾರಕ್ಕೆ ಕಳಿಸುವುದಾಗಿ ಹೇಳಿದರು. ಲೋಕೇಶ ಚಲವಾದಿ, ವಿನಾಯಕ ಆಚಾರ್ಯ, ಸುದೀಪ ನಿಂಗಪ್ಪನವರ, ಪ್ರವೀಣ ಇಚ್ಚಂಗಿಮಠ, ನಿರಂಜನ ಎಂ, ಅನಿಲ ಬಳ್ಳಾರಿ, ಆದಿತ್ಯ ಸೊಗಲಿ, ಕಾರ್ತಿಕ ಜಾಲಗಾರ, ಮೈಲಾರಿ ಲಮಾಣಿ, ಶಿವರಾಜ್ ಡವಗಿ ಸೇರಿದಂತೆ ವಿದ್ಯಾರ್ಥಿಗಳು, ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net