

ಮುದ್ದೇಬಿಹಾಳ:ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ಗಳ ಮೂಲ ಸೌಲಭ್ಯ ಸರಿಪಡಿಸುವಂತೆ ಆಗ್ರಹಿಸಿ ಪಟ್ಟಣದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿ ನಂತರ ಶಿರಸ್ತೇದಾರ ಎಂ.ಎ. ಬಾಗೇವಾಡಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಒಂದು ದೇಶ ಹಾಗೂ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಲು ಶಿಣ ವ್ಯವಸ್ಥೆಗೆ ಬೇಕಾದ ಮೂಲ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಒದಗಿಸುವುದು ಸರ್ಕಾರಗಳ ಪ್ರಮುಖ ಕರ್ತವ್ಯ. ಗ್ರಾಮೀಣ ಭಾಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಶಿಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಆದರೆ ಅವುಗಳ ಅನುಷ್ಠಾನ ಮಾತ್ರ ಸಮರ್ಪವಾಗಿ ನಡೆಯುತ್ತಿಲ್ಲ. ಅದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದ್ದು, ವಿದ್ಯಾರ್ಥಿಗಳಿಗೆ ಸರಿಯಾದ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸದೇ ಹಾಗೂ ವಿದ್ಯಾರ್ಥಿ ವೇತನ ನೀಡದೆ ರಾಜ್ಯ ಸರ್ಕಾರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಅಸಮಾಧಾನ ಹೊರ ಹಾಕಿದರು.
ರಾಜ್ಯದಲ್ಲಿರುವ ಹಾಸ್ಟೆಲ್ಗಳಲ್ಲಿ ಕಳೆದ 3 ವರ್ಷಗಳ ವರದಿ ಅನ್ವಯ ಅರ್ಜಿ ಸಲ್ಲಿಸಿದ 100 ವಿದ್ಯಾರ್ಥಿಗಳಲ್ಲಿ 40 ರಿಂದ 50 ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯ ಸಿಗುತ್ತಿದ್ದೆ.
ಇನ್ನುಳಿದ ವಿದ್ಯಾರ್ಥಿಗಳು ವಸತಿ ನಿಲಯ ಸಿಗದೇ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.
ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆಯಾ ಜಿಲ್ಲೆಗಳಿಗೆ ಹೊಸ ವಸತಿ ನಿಲಯಗಳನ್ನು ಸರ್ಕಾರ ೂಷಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರ ನೀಡುವ ವಿದ್ಯಾರ್ಥಿ ವೇತನ ನಂಬಿ ಲಾಂತರ ಬಡ ವಿದ್ಯಾರ್ಥಿಗಳು ಶಿಣ ಪಡೆಯುತ್ತಿದ್ದಾರೆ. ವಿದ್ಯಾರ್ಥಿ ವೇತನಕ್ಕೆ ಕಳೆದ ವರ್ಷ ಅರ್ಜಿ ಸಲ್ಲಿಸಿದ ಲಾಂತರ ವಿದ್ಯಾರ್ಥಿಗಳಿಗೆ ಇನ್ನುವರೆಗೂ ವಿದ್ಯಾರ್ಥಿ ವೇತನ ಜಮೆಯಾಗಿಲ್ಲ. ಅದರಿಂದ ಬಹಳಷ್ಟು ತೊಂದರೆ ಆಗುತ್ತಿದ್ದು, ಸರ್ಕಾರ ಕೂಡಲೇ ವಿದ್ಯಾರ್ಥಿ ವಿರೋಧಿ ನೀತಿ ಕೈ ಬಿಟ್ಟು ತಣವೇ ವಿದ್ಯಾರ್ಥಿವೇತನ ಜಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೆಗೊಳ್ಳಬೇಕು. ಇಲ್ಲದಿದ್ದರೇ ಮುಂಬರುವ ದಿನಗಳಲ್ಲಿ ರಾಜ್ಯಾದ್ಯಾಂತ ಹೋರಾಟ ಅನಿವಾರ್ಯವಾಗಲಿದೆ ಎಂದು ಎಬಿವಿಪಿ ಸದಸ್ಯರು ಎಚ್ಚರಿಕೆ ನೀಡಿದರು.
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಬಿವಿಪಿ ಸದಸ್ಯರು ಮುದ್ದೇಬಿಹಾಳ ಪಟ್ಟಣದಲ್ಲಿ ಶಿರಸ್ತೇದಾರ ಎಂ.ಎ. ಬಾಗೇವಾಡಿ ಅವರಿಗೆ ಮನವಿ ಸಲ್ಲಿಸಿದರು.