

ಬಂಟ್ವಾಳ: ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದಲ್ಲಿ 35 ವರ್ಷ ಆಡಳಿತ ಮೊಕ್ತೇಸರ ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಎ.ಸಿ.ಭಂಡಾರಿ ಅವರಿಗೆ ವಿಘ್ನೇಶ್ವರ ಸೇವಾ ಸಮಿತಿ ಮತ್ತು ನೇತ್ರಾವತಿ ಯುವಕ ಮಂಡಲ ವತಿಯಿಂದ ಪೌರಸನ್ಮಾನ ನಡೆಯಿತು.
ಪ್ರಧಾನ ಅರ್ಚಕ ಮಹೇಶ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಶಿವರಾಮ ಮಯ್ಯ ತನ್ನಚ್ಚಿಲ್ ಅಧ್ಯಕ್ಷತೆ ವಹಿಸಿದ್ದರು.
ಕೆಲಿಂಜ ಉಳ್ಳಾಲ್ತಿ ಕ್ಷೇತ್ರದ ಆನುವಂಶಿಕ ಮೊಕ್ತೇಸರ ಪಿ.ಶಂಕರನಾರಾಯಣ ಭಟ್, ಉದ್ಯಮಿ ವಿವೇಕ್ ಬಾಳಿಗಾ, ವಿಘ್ನೇಶ್ವರ ಸೇವಾ ಸಮಿತಿ ಅಧ್ಯಕ್ಷ ಅಶೋಕ ಗಟ್ಟಿ ನಂದಾವರ, ನೇತ್ರಾವತಿ ಯುವಕ ಮಂಡಲ ಅಧ್ಯಕ್ಷ ಚಂದ್ರಶೇಖರ ಕುಲಾಲ್ ಉಪಸ್ಥಿತರಿದ್ದರು.
ಬಿ.ಕೆ.ರಾಜ ನಂದಾವರ ಸನ್ಮಾನಿತರ ಪರಿಚಯ ಮಾಡಿದರು. ಕಾರ್ತಿಕ್ ಶಾಸ್ತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣೇಶ್ ಕಾಪಿಕಾಡ್ ಸ್ವಾಗತಿಸಿದರು. ಶ್ರೀನಿವಾಸ ಗಟ್ಟಿ ನಂದಾವರ ವಂದಿಸಿದರು. ಕಲಾವಿದ ರಾಘವೇಂದ್ರ ಕಾರಂತ ಕಾರ್ಯಕ್ರಮ ನಿರ್ವಹಿಸಿದರು. ಕಳೆದ ಸಾಲಿನ ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ಗೌರವಿಸಲಾಯಿತು.