

ಮುದಗಲ್: ಪಿ.ಎಂ. ಜವಾಹರ ನವೋದಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ಶಿಕ್ಷಕರ ದಿನ ಆಚರಿಸಲಾಯಿತು. ಮಾಜಿ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಪ್ರಭಾರ ಪ್ರಾಚಾರ್ಯ ರಮೇಶ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಉಪನ್ಯಾಸಕ ಶ್ರೀಧರಾಚಾರ್ಯ ಮಾತನಾಡಿ, ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ನೀಡಿದ ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳ್ನು ಮೈಗೂಡಿಸಿಕೊಳ್ಳಬೇಕು. ಆಧುನಿಕ ಶಿಕ್ಷಣ ವ್ಯವಸ್ಥೆಗೆ ತಕ್ಕಂತೆ ಮಕ್ಕಳು ಸ್ಪರ್ಧಾ ಭಾವನೆ ಬೆಳೆಸಿಕೊಂಡು ಶಿಕ್ಷಣದಲ್ಲಿ ಸರ್ವತೋಮುಖ ಸಾಧನೆ ಮಾಡುವಂತೆ ಕಿವಿಮಾತು ಹೇಳಿದರು. ವಿದ್ಯಾರ್ಥಿಗಳು ಶಿಕ್ಷಕರನ್ನು ಸನ್ಮಾನಿಸಿದರು.