ಶಿಸ್ತು, ಗುಣಮಟ್ಟದ ಶಿಕ್ಷಣ ಮಾದರಿ

sammelana
ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಡುಪಿಯಲ್ಲಿ ನಡೆದ ಶೈಕ್ಷಣಿಕ ಸಮ್ಮೇಳನ ಮತ್ತು ವಾರ್ಷಿಕ ಮಹಾಸಭೆಯನ್ನು ಉಡುಪಿ ಜಿಪಂ ಮುಖ್ಯ ಯೋಜನಾಧಿಕಾರಿ ಡಾ.ಉದಯ ಶೆಟ್ಟಿ ಉದ್ಘಾಟಿಸಿದರು.
Published on

ಹೆಬ್ರಿ: ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳು ವಿದ್ಯಾರ್ಥಿಗಳನ್ನು ಕೈ ಬೀಸಿ ಕರೆಯುತ್ತಿವೆ. ಶಿಸ್ತು ಮತ್ತು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಪ್ರಾಂಶುಪಾಲರ ಮತ್ತು ಉಪನ್ಯಾಸಕರ ಶ್ರಮ ಬೇರೆ ಜಿಲ್ಲೆಯವರಿಗೆ ಮಾದರಿ ಎಂದು ಉಡುಪಿ ಜಿಪಂ ಮುಖ್ಯ ಯೋಜನಾಧಿಕಾರಿ ಡಾ.ಉದಯ ಶೆಟ್ಟಿ ಹೇಳಿದರು.

ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಡುಪಿಯಲ್ಲಿ ನಡೆದ ಶೈಕ್ಷಣಿಕ ಸಮ್ಮೇಳನ ಮತ್ತು ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ನಿವೃತ್ತ ಉಪನಿರ್ದೇಶಕ ಆರ್.ಬಿ.ನಾಯಕ ಮಾತನಾಡಿದರು. ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ ಅಧ್ಯಕ್ಷತೆ ವಹಿಸಿದ್ದರು. ಸಾಧಕ ವಿದ್ಯಾರ್ಥಿಗಳನ್ನು ಹಾಗೂ ನಿವೃತ್ತ ಪ್ರಾಂಶುಪಾಲರನ್ನು ಸನ್ಮಾನಿಸಲಾಯಿತು. ಶೇ.90ಕ್ಕಿಂತ ಹೆಚ್ಚು ಫಲಿತಾಂಶ ಪಡೆದ ಕಾಲೇಜುಗಳಿಗೆ ಪ್ರಶಂಸಾ ಪತ್ರ ನೀಡಲಾಯಿತು. ಪ್ರಶ್ನೆ ಪತ್ರಿಕೆ ಕಾರ್ಯಾಗಾರದಲ್ಲಿ ಪಾಲ್ಗೊಂಡ 115 ಉಪನ್ಯಾಸಕರಿಗೆ ಗೌರವ ಮಾಡಲಾಯಿತು. ರಾಜ್ಯ ಸಂಘದ ಪ್ರತಿನಿಧಿ ಡಾ.ಜಿ.ಎಂ.ಗೊಂಡ, ಉಡುಪಿ ಸ.ಪ.ಪೂ ಕಾಲೇಜು ಪ್ರಾಂಶುಪಾಲೆ ಲೀಲಾ ಬಾಯಿ ಭಟ್, ಸಾಂಸ್ಕೃತಿಕ ಸಂಚಾಲಕಕಿ ಸುಚೇತಾ, ಪರೀಕ್ಷಾ ಸಂಚಾಲಕ ಮಂಜುನಾಥ ಭಟ್ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಅಧ್ಯಕ್ಷ ವರ್ಗೀಸ್ ಸ್ವಾಗತಿಸಿದರು. ಕಾರ್ಯದರ್ಶಿ ನಾಗರಾಜ ವೈದ್ಯ ವರದಿ ವಾಚಿಸಿದರು. ಖಜಾಂಚಿ ಜಗದೀಶ್ ಕುಮಾರ್ ವಂದಿಸಿದರು. ಪ್ರಾಂಶುಪಾಲ ವಿಶ್ವನಾಥ್ ಕರಬ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net