

ಸುಂಟಿಕೊಪ್ಪ: ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಸಂಸತ್ ಚುನಾವಣೆ ನಡೆಯಿತು.
ವಿದ್ಯಾರ್ಥಿಗಳಲ್ಲಿ ಚುನಾವಣೆ ಬಗ್ಗೆ ಅರಿವು ಮತ್ತು ಮಹತ್ವದ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ನಡೆಸಲಾಯಿತು.
ಶಾಲಾ ವಿದ್ಯಾರ್ಥಿ ಸಂಘದ 13 ಸ್ಥಾನಗಳಿಗೆ ಗೌಪ್ಯ ಮತದಾನ ಮಾಡಲಾಯಿತು. ಮುಖ್ಯ ಶಿಕ್ಷಕ ಬಾಲಕೃಷ್ಣ, ಶಿಕ್ಷಕರಾದ ಪ್ರಕಾಶ್, ಚಿತ್ರಾ, ಸುನಂದಾ ಇತರರು ಇದ್ದರು.
ಮಂತ್ರಿ ಮಂಡಲ ರಚನೆ: ಶಾಲಾ ನಾಯಕನಾಗಿ ಅಜಿತ್, ಉಪನಾಯಕಿಯಾಗಿ ವೈಷ್ಣವಿ, ಆಹಾರ ಮಂತ್ರಿಯಾಗಿ ರಿದಾ ಮರಿಯಮ್, ಆಹಾರ ಉಪ ಮಂತ್ರಿಯಾಗಿ ನಿಶ್ಮಿತಾ, ರಂಜಿತಾ, ಆರೋಗ್ಯ ಮಂತ್ರಿಯಾಗಿ ಮೊಹಮ್ಮದ್ ಶಹಬಾಸ್, ಆರೋಗ್ಯ ಉಪ ಮಂತ್ರಿಯಾಗಿ ರೆಹನತ್, ಸ್ವಚ್ಚತಾ ಮಂತ್ರಿ ಹಾಗೂ ಶಾಲಾ ಭದ್ರತಾ ಸಮಿತಿ ಮಂತ್ರಿಯಾಗಿ ಲೇಖಿಕ್, ಉಪ ಮಂತ್ರಿಯಾಗಿ ಅರ್ಪಿತಾ ರಾಡ್ರಿಗಸ್, ಕ್ರೀಡಾಮಂತ್ರಿಯಾಗಿ ಶಶಿಕಾಂತ, ಉಪಮಂತ್ರಿಯಾಗಿ ಸೃಜನ, ಸಾಂಸ್ಕೃತಿಕ ಮತ್ತು ವಾರ್ತಾ ಮಂತ್ರಿಯಾಗಿ ದೀಕ್ಷಾ, ವಾರ್ತಾ ಉಪಮಂತ್ರಿಯಾಗಿ ನೌಶಿನ ಆಯ್ಕೆಯಾದರು.