

ಮಡಿಕೇರಿ:
ದೇಶದ ಮಹಾನ್ ದಂಡನಾಯಕರಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್. ತಿಮ್ಮಯ್ಯ ಅವರನ್ನು ಅವಹೇಳನ ಮಾಡಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಗುರುವಾರ ನಡೆದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸರ್ವ ಸದಸ್ಯರ ತುರ್ತು ಸಭೆಯಲ್ಲಿ ಖಂಡನಾ ನಿರ್ಣಯ ತೆಗೆದುಕೊಳ್ಳಲಾಗಿದೆ.
ಅವಹೇಳನ ಮಆಡಿರುವ ವ್ಯಕ್ತಿಯನ್ನು ವ್ಯಕ್ತಿಯನ್ನು ಗಡಿಪಾರು ಮಾಡುವುದಲ್ಲದೆ ಜಿಲ್ಲೆಯಲ್ಲಿ ನಡೆಯುವ ಯಾವುದೇ ಸಭೆ ಸಮಾರಂಭಗಳು, ಕಾರ್ಯಕ್ರಮಗಳಿಗೆ ಆತನನ್ನು ಆಹ್ವಾನಿಸಬಾರದೆಂಬ ಮನವಿಯನ್ನು ಸಾರ್ವಜನಿಕರಲ್ಲಿ ಮಾಡುವಂತೆ ತೀರ್ಮಾನಿಸಲಾಯಿತು. ನ್ಯಾಯಾಲಯವು ಈ ವ್ಯಕ್ತಿಗೆ ಕಾನೂನಿನ ಅಡಿಯಲ್ಲಿ ವಿಧಿಸಬಹುದಾದ ಗರಿಷ್ಠ ಮಟ್ಟದ ಶಿಕ್ಷೆಯನ್ನು ನೀಡಬೇಕಾಗಿ ಒತ್ತಾಯಿಸುವಂತೆ ಅಭಿಪ್ರಾಯಿಸಲಾಯಿತು.
ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಅಧ್ಯಕ್ಷತೆಯಲ್ಲಿ ನಡೆದ ಈ ತುರ್ತು ಸಭೆಯಲ್ಲಿ ಸದಸ್ಯರುಗಳಾದ ಪುತ್ತರಿರ ಪಪ್ಪು ತಿಮ್ಮಯ್ಯ, ಕಂಬೆಯAಡ ಡೀನಾ ಬೋಜಣ್ಣ, ಮೊಳ್ಳೆಕುಟ್ಟಡ ದಿನು ಬೋಜಪ್ಪ, ಕೊಂಡಿಜಮ್ಮAಡ ಎಂ.ಬಾಲಕೃಷ್ಣ, ಪಾನಿಕುಟ್ಟಿರ ಕೆ.ಕುಟ್ಟಪ್ಪ, ಪೊನ್ನಿರ ಯು.ಗಗನ್, ಕುಡಿಯರ ಕಾವೇರಪ್ಪ, ನಾಯಂದಿರ ಆರ್.ಶಿವಾಜಿ, ಚೆಪ್ಪುಡಿರ ಎಸ್.ಉತ್ತಪ್ಪ, ಚೊಟ್ಟೆಯಂಡ ಎ. ಸಂಜು ಕಾವೇರಪ್ಪ ಹಾಗೂ ಸಿಬ್ಬಂದಿ ಇದ್ದರು.