ಉಡುಪಿ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿ ಮನೆಗೆ ಎಸಿಬಿ ದಾಳಿ, ಮಹತ್ವದ ದಾಖಲೆ ವಶ

acb new
Published on

ಉಡುಪಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸರು ಗ್ರಾಮೀಣಾಭಿವೃದ್ಧಿ ಇಲಾಖೆ ಎಕ್ಸಿಕ್ಯೂಟಿವ್ ಇಂಜಿನಿಯರ್ ಕೃಷ್ಣ ಹೆಬ್ಸೂರು ಮನೆ ಹಾಗೂ ಕಚೇರಿ ಮೇಲೆ ಗುರುವಾರ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳ ಡಿವೈಎಸ್‌ಪಿ ಮಂಜುನಾಥ್ ಕವರಿ ನೇತೃತ್ವದಲ್ಲಿ 8 ಮಂದಿ ಸಿಬ್ಬಂದಿ ದೊಡ್ಡಣಗುಡ್ಡೆಯಲ್ಲಿರುವ ಮನೆಗೆ ಬಂದಾಗ ಬೀಗ ಹಾಕಲಾಗಿತ್ತು. ಸುಮಾರು 2 ಗಂಟೆ ಬಳಿಕ ಆಗಮಿಸಿದ ಹೆಬ್ಸೂರು ಮನೆ ಬಾಗಿಲು ತೆರೆದಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದರು. ಉಡುಪಿ ಜಿಲ್ಲಾ ಪಂಚಾಯಿತಿಯಲ್ಲಿರುವ ಇಲಾಖೆ ಕಚೇರಿಗೂ ತೆರಳಿದ ಎಸಿಬಿ ಆಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net