ಬಿಬಿಎಂಪಿಯ 27 ಕಚೇರಿಗಳ ಮೇಲೆ ಏಕಕಾಲದಲ್ಲಿ ಎಸಿಬಿ ದಾಳಿ..

ACB
Published on

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ರಾಜಧಾನಿ ಬೆಂಗಳೂರಿನಲ್ಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 27 ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಬಿಬಿಎಂಪಿಯ ಕೇಂದ್ರ ಕಚೇರಿ, ವಲಯ ಕಚೇರಿ, ಜಂಟಿ ಆಯುಕ್ತರ ಕಚೇರಿ ಸೇರಿ ನಗರದ 27 ಬಿಬಿಎಂಪಿ ಕಚೇರಿಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಒಟ್ಟು ಸುಮಾರು ಮೂರು ಗಂಟೆಗಳಿಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿದ್ದಾರೆ. ಒಟ್ಟು ಹನ್ನೊಂದು ಸ್ಥಳಗಳಲ್ಲಿ ಈ ದಾಳಿ ನಡೆದಿದೆ.

ಕಳೆದೊಂದು ವರ್ಷದಿಂದ ಎಸಿಬಿಗೆ ಬರುತ್ತಿದ್ದ ದೂರುಗಳ ಆಧಾರದ ಮೇಲೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ಈ ದಾಳಿಯನ್ನು ನಡೆಸಲಾಗಿದೆ. ದಾಳಿ ವೇಳೆ ಕೋಟ್ಯಂತರ ಮೌಲ್ಯದ ವ್ಯವಹಾರದ ಕಡತಗಳು ಪತ್ತೆಯಾಗಿದ್ದು, ದಾಖಲೆಗಳ ಪರಿಶೀಲನೆ ಜತೆಗೆ ಬಿಬಿಎಂಪಿ ಅಧಿಕಾರಿ-ಸಿಬ್ಬಂದಿಯ ವಿಚಾರಣೆ ಕೂಡ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net