

ಚಿಕ್ಕೋಡಿ: ಕಳೆದ ಮೂರ‌್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಹಿಂಗಾರು ಮಳೆಯಿಂದಾಗಿ ಚಿಕ್ಕೋಡಿ ಉಪವಿಭಾಗದಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿವೆ.
ಜಿಲ್ಲೆಯ ಹುಕ್ಕೇರಿ, ಚಿಕ್ಕೋಡಿ ಭಾಗದಲ್ಲಿ ಮಳೆಯಿಂದಾಗಿ ಜನರು ಬಿತ್ತನೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಹಿಂಗಾರು ಹಂಗಾಮಿನಲ್ಲಿ ಜಿಲ್ಲಾಯಾದ್ಯಂತ 3.30 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಬೇಕಿದೆ. ಹಿಂಗಾರು ಹಂಗಾಮಿನಲ್ಲಿ ಕಡಲೆ, ಜೋಳ, ಗೋಧಿ, ಸೋಯಾಬೀನ್ ಬೆಳೆಯಲಾಗುತ್ತಿದೆ. ಹಿಂಗಾರು ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.