ಸೋಲನ್ನು ಸವಾಲಾಗಿ ಸ್ವೀಕರಿಸಿ

Accept failure as a challenge
ಮುಧೋಳದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಸನ್ಮಾನ ಸಮಾರಂಭ ಹಾಗೂ ನನ್ನ ದೇಶ ನನ್ನ ಮಣ್ಣು ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪಿಕೆಪಿಎಸ್‌ಗೆ ಆಯ್ಕೆಯಾದವರನ್ನು ಸನ್ಮಾನಿಸಲಾಯಿತು. ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಜಿಲ್ಲಾ ಪ್ರಮುಖ ನಂದು ಗಾಯಕವಾಡ, ಗ್ರಾಮೀಣ ಘಟಕದ ಅಧ್ಯಕ್ಷ ಹಣಮಂತ ತುಳಸಿಗೇರಿ ಇತರರಿದ್ದರು.
Published on

ಮುಧೋಳ: ನಾನು ಚುನಾವಣೆಯಲ್ಲಿ ಸೋತಿದ್ದೇನೆ, ಸೋಲಿನಿಂದ ಧೃತಿಗೆಟಿಲ್ಲ. ಸೋಲನ್ನು ಸವಾಲಾಗಿ ಸ್ವೀಕರಿಸಿ ಮುನ್ನಡೆಯೋಣ ಎಂದು ಗೋವಿಂದ ಕಾರಜೋಳ ಹೇಳಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಬಿಜೆಪಿ ಆಯೋಜಿಸಿದ್ದ ತಾಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪಿಕೆಪಿಎಸ್ ಚುನಾವಣೆಯಲ್ಲಿ ಆಯ್ಕೆಯಾದವರಿಗೆ ಸನ್ಮಾನ ಹಾಗೂ ನನ್ನ ದೇಶ ನನ್ನ ಮಣ್ಣು ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಲೋಕಸಭೆ ಚುನಾವಣೆಯಲ್ಲಿ ಗೆದ್ದು ನಿರಾಸೆ ದೂರ ಮಾಡೋಣ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನೇ ಸ್ಪರ್ಧಿಸುತ್ತೇನೆ. ಪ್ರಧಾನಿ ಮೋದಿ ದೇಶದ ಕೀರ್ತಿ ಹೆಚ್ಚಿಸಿದ್ದಾರೆ. ಬಿಜೆಪಿ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ ಎಂದು ತಿಳಿಸಿದರು.

ಎಸ್. ನಿಜಲಿಂಗಪ್ಪ ಅವರು ಪ್ರಧಾನಮಂತ್ರಿ ಆಗುವ ನಿರೀಕ್ಷೆಯಲ್ಲಿದ್ದರು. ಅವರನ್ನು ಕಾಂಗ್ರೆಸ್ ಮುಂದೆ ಬಿಡಲಿಲ್ಲ. ಲಿಂಗಾಯತರಿಗೆ ಅನ್ಯಾಯವಾಗಿದೆ ಎಂದು ಹೇಳಿ ಕಾಂಗ್ರೆಸ್ ಮತ ಗಳಿಸಿತು. ಬಿಜೆಪಿಯಲ್ಲಿ ಲಿಂಗಾಯತರನ್ನು ನಮ್ಮ ಮನೆಯವರಂತೆ ನೋಡಿಕೊಳ್ಳುತ್ತಿದ್ದೇವೆ ಎಂದರು.

ಅಭಿಯಾನದ ಜಿಲ್ಲಾ ಪ್ರಮುಖ ನಂದು ಗಾಯಕವಾಡ ಮಾತನಾಡಿದರು. ಗ್ರಾಮೀಣ ಘಟಕದ ಅಧ್ಯಕ್ಷ ಹಣಮಂತ ತುಳಸಿಗೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net