

ವಿಜಯವಾಣಿ ಸುದ್ದಿಜಾಲ ಕೋಟ
ಕ್ರೀಡೆಯಲ್ಲಿ ಸೋಲು-ಗೆಲುವು ಸಹಜವಾಗಿದ್ದು ಕ್ರೀಡಾಪಟುಗಳು ಅದನ್ನು ಸಮನಾಗಿ ಸ್ವೀಕರಿಸಿ ಯಶಸ್ಸಿನತ್ತ ಮುನ್ನುಗ್ಗಬೇಕು ಎಂದು ಎಂದು ಕುಂದಾಪುರದ ಶಾಸಕ ಕಿರಣ್‌ಕುಮಾರ್ ಕೊಡ್ಗಿ ಹೇಳಿದರು.
ಗುರುವಾರ ಕೋಡಿ ಕನ್ಯಾಣದ ಸೋಮಬಂಗೇರ ಪ್ರೌಢಶಾಲಾ ಮೈದಾನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ , ಉಡುಪಿ ಜಿಪಂ ಉಪ ನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ವಲಯ, ಕೋಡಿಕನ್ಯಾಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ 14ರ ಮತ್ತು 17ರ ವಯೋಮಾನದ ಬಾಲಕ, ಬಾಲಕಿಯರ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾವಳಿ eವಿಕ್ರಾಂತ-2025f ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೋಡಿ ಗ್ರಾಪಂ ಅಧ್ಯಕ್ಷೆ ಗೀತಾ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ, ಕೋಟ ಸಹಕಾರಿ ವ್ಯವಸಾಯಕ ಸಂಘ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್, ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಜಯಂತ್ ಅಮೀನ್ ಕೋಡಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣ ಇಲಾಖೆ ಸಂಯೋಜಕ ಪ್ರಕಾಶ್ ಬಿ.ಬಿ., ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಪ್ರಗತಿ ಯುವಕ ಸಂಘ ಅಧ್ಯಕ್ಷ ಉದಯ್ ಕಾಂಚನ್, ಶ್ರೀರಾಮ ಮಂದಿರ ಅಧ್ಯಕ್ಷ ರಾಘವೇಂದ್ರ ಕರ್ಕೇರ, ಕೋಡಿ ಪಿಡಿಒ ರವೀಂದ್ರ ರಾವ್, ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ಉಡುಪಿ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯ್ಕ, ಕಾರ್ಕಳ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್, ಕುಂದಾಪುರ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ, ಬೈಂದೂರು ತಾಲೂಕಿನ ಅಧಿಕಾರಿ ವಿಜಯ ಕುಮಾರ್ ಶೆಟ್ಟಿ, ಕೋಡಿ ಮೀನುಗಾರರ ಸಹಕಾರ ಸಂಘ ಅಧ್ಯಕ್ಷ ಅಶೋಕ್ ತಿಂಗಳಾಯ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ರಾಧಿಕಾ,ಪದವಿಪೂರ್ವ ಕಾಲೇಜು ಪ್ರಾಂಶುಪಾಲ ರಾಘವೇಂದ್ರ ಅಡಿಗ, ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಾಮಚಂದ್ರ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕಿ ಸಂಪಾ ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಿತ್ರಪಾಡಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ವಿಜಯ ನಾಯರಿ ವಂದಿಸಿದರು. ಕೋಡಿ ಪಂಚಾಯಿತಿ ಸದಸ್ಯ ಪ್ರಭಾಕರ್ ಮೆಂಡನ್ ಸಹಕರಿಸಿದರು.