

ಮೂಡುಬಿದಿರೆ: ಕರ್ನಾಟಕ ಲೋಕಾಯುಕ್ತ ಎಸ್‌ಪಿ ಸೈಮನ್ ಹಾಗೂ ಅಧಿಕಾರಗಳ ತಂಡ ತಾಲೂಕು ಆಡಳಿತ ಸೌಧದಲ್ಲಿ ಬುಧವಾರ ಜನಸಂಪರ್ಕ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಸರ್ವೇ(2 ದೂರುಗಳು), ಕಂದಾಯ (5) ಪಂಚಾಯಿತಿ(1), ಪುರಸಭೆ (1), ಕೇಂದ್ರ ಲೋಕಾಯುಕ್ತ(1) ಸಹಿತ 10 ದೂರುಗಳು ಬಂದಿದ್ದು, ಈ ದೂರುಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ದೂರುಗಳು ಇತ್ಯರ್ಥವಾಗದಿದ್ದಲ್ಲಿ ಲೋಕಾಯುಕ್ತಕ್ಕೆ ಪ್ರತ್ಯೇಕವಾಗಿ ಲಿಖಿತ ದೂರು ಸಲ್ಲಿಸುವಂತೆ ದೂರುದಾರರಿಗೆ ಸಲಹೆ ನೀಡಿದರು.
ಬೆಳುವಾಯಿಯ ಸದಾಶಿವ ಶೆಟ್ಟಿ, ದಲಿತ ಮುಖಂಡ ನೀಲಯ್ಯ, ವಾಲ್ಪಾಡಿ ಪಂಚಾಯಿತಿ ಮಾಜಿ ಅಧ್ಯಕ್ಷ ಅರುಣ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಸದಾನಂದ ನಾರಾವಿ, ಪತ್ರಕರ್ತ ಧನಂಜಯ ಮೂಡುಬಿದಿರೆ, ಕೃಷಿಕ ಎಡ್ವರ್ಡ್ ರೆಬೆಲ್ಲೋ ಅಹವಾಲು ಸಲ್ಲಿಸಿದರು.
ಲೋಕಾಯುಕ್ತ ಡಿವೈಎಸ್‌ಪಿಗಳಾದ ಚೆಲುವರಾಜ್, ಕಲಾವತಿ, ನಿರೀಕ್ಷಕ ವಿನಾಯಕ ಬಿಲ್ಲವ ಉಪಸ್ಥಿತರಿದ್ದರು. ತಹಸೀಲ್ದಾರ್ ಸಚ್ಚಿದಾನಂದ ಸತ್ಯಪ್ಪ ಕುಚನೂರು, ತಾಪಂ ಕಾರ್ಯನಿರ್ವಹಣಾಧಿಕಾರಿ ದಯಾವತಿ, ಪುರಸಭೆ ಮುಖ್ಯಾಧಿಕಾರಿ ಶಿವನಾಯಕ, ಪೊಲೀಸ್ ನಿರೀಕ್ಷಕ ಸಿದ್ದಪ್ಪ ಹಾಗೂ ವಿವಿಧ ಇಲಾಖಾಧಿಕಾರಿಗಳು ಪಾಲ್ಗೊಂಡರು.