ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟ ರಚಿಸಿದ ದಕ್ಷಿಣ ಕನ್ನಡ ಭಾಷಾ ಸೊಗಡಿನ ಮೂರನೇ ಕೃತಿ ಅಚ್ಚಣ್ಣ ಭಟ್ರು ಕಾದಂಬರಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟ, ಅಭಿಗಮ್ಯ ರಾಮ್, ಆಶ್ಮನ್ ಕೃಷ್ಣ, ವಕೀಲ, ಜ್ಯೋತಿಷಿ ಗಟ್ಟಿಗಾರು ಗೋಪಾಲಕೃಷ್ಣ ಭಟ್, ನಿವೃತ್ತ ಮುಖ್ಯಶಿಕ್ಷಕಿ ಬಿ.ಕೆ.ಶೈಲಾ ಉಪಸ್ಥಿತರಿದ್ದರು. ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಎಸ್.ಸತೀಶ್ಚಂದ್ರ ಶುಭಹಾರೈಸಿದರು.