

ಹಲಗೂರು: ಕ್ಯಾಂಟರ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮಂಡ್ಯ ತಾಲೂಕು ಜೀಗುಂಡಿಪಟ್ಟಣ ನಿವಾಸಿ ಮುತ್ತಯ್ಯ ಅವರ ಪುತ್ರ ಮುತ್ತುರಾಜು (42) ಮೃತ ವ್ಯಕ್ತಿ. ಸಮೀಪದ ಮಡಹಳ್ಳಿಯಲ್ಲಿನ ತಮ್ಮ ಸಂಬಂಧಿಕರ ಮನೆಗೆ ನಡೆದುಕೊಂಡು ತೆರಳುತ್ತಿದ್ದಾಗ ಮುತ್ತತ್ತಿ ರಸ್ತೆ ಹಲಗೂರು ಬೈಪಾಸ್ ರಸ್ತೆ ಬಳಿ ಮಳವಳ್ಳಿ ಕಡೆಯಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆಯಿತು. ಅಪಘಾತದಲ್ಲಿ ತೀವ್ರ ಗಾಯಗೊಂಡ ಮುತ್ತುರಾಜು ಅವರನ್ನು ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತದರೂ, ಆ ವೇಳೆಗಾಗಲೇ ಮೃತಪಟ್ಟಿದ್ದರು. ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಸಂಬಂಧಿಕರಿಗೆ ನೀಡಲಾಯಿತು. ಹಲಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.