ಬಾಂಬಿಲ ಕಾರು ಅಪಘಾತ ಮಹಿಳೆ ಸಾವು

IMG-20241014-WA0006
Published on

ಬಂಟ್ವಾಳ: ಬಿ.ಸಿರೋಡು- ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಡಿಕೆ ತೋಟಕ್ಕೆ ಉರುಳಿ ಬಿದ್ದ ಘಟನೆ ನಡೆದಿದ್ದು ಕಾರಿನಲ್ಲಿದ್ದ ಮಹಿಳೆ ಮೃತಪಟ್ಟು ಚಾಲಕ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಮೃತಪಟ್ಟ ಮಹಿಳೆಯಾಗಿದ್ದಾರೆ. ಚಾಲಕ ರೂಪೇಶ್ (40) ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರೂಪೇಶ್ ಅವರ ಪತ್ನಿ ಸುಚಿತ್ರ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲಕಾರು ಬೆಳಿಗ್ಗೆನ ಜಾವ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಭಾಗೀರಥಿ ಅವರ ಮಗಳು ಸುಚಿತ್ರ ಅವರ ಪತಿ ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ದಸರಾ ರಜೆಯಲ್ಲಿ ಅಳಿಯ ಮಗಳ ಜೊತೆ ತುಮಕೂರಿಗೆ ಹೋಗಿ ವಾಪಾಸು ಮಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net